ಬಳ್ಳಾರಿ : ಇಂಡಿಯಾ ಒಕ್ಕೂಟದಿಂದ ಎಸ್ಐಆರ್ ವಿರುದ್ಧ ಪ್ರತಿಭಟನೆ
ಬಳ್ಳಾರಿ, 06 ಅಕ್ಟೋಬರ್ (ಹಿ.ಸ.) ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಬಳ್ಳಾರಿ ಜಿಲ್ಲೆಯ ಎಲ್ಲಾ ಪಕ್ಷಗಳ ವತಿಯಿಂದ ಎಸ್ಐಆರ್ `ವೋಟ್ ಚೋರಿ''ಯನ್ನು ಖಂಡಿಸಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಬಳ್ಳಾರಿ ಜಿಲ್ಲಾ ನಗರ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರ ನೇತ
ಬಳ್ಳಾರಿ : ಇಂಡಿಯ ಒಕ್ಕೂಟದಿಂದ ಎಸ್ಐಆರ್ ವಿರುದ್ಧ ಪ್ರತಿಭಟನೆ


ಬಳ್ಳಾರಿ : ಇಂಡಿಯ ಒಕ್ಕೂಟದಿಂದ ಎಸ್ಐಆರ್ ವಿರುದ್ಧ ಪ್ರತಿಭಟನೆ


ಬಳ್ಳಾರಿ : ಇಂಡಿಯ ಒಕ್ಕೂಟದಿಂದ ಎಸ್ಐಆರ್ ವಿರುದ್ಧ ಪ್ರತಿಭಟನೆ


ಬಳ್ಳಾರಿ, 06 ಅಕ್ಟೋಬರ್ (ಹಿ.ಸ.)

ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಬಳ್ಳಾರಿ ಜಿಲ್ಲೆಯ ಎಲ್ಲಾ ಪಕ್ಷಗಳ ವತಿಯಿಂದ ಎಸ್ಐಆರ್ `ವೋಟ್ ಚೋರಿ'ಯನ್ನು ಖಂಡಿಸಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಬಳ್ಳಾರಿ ಜಿಲ್ಲಾ ನಗರ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರ ನೇತೃತ್ವದಲ್ಲಿ ಇಂಡಿಯ ಒಕ್ಕೂಟದ ಪಕ್ಷಗಳು ಒಗ್ಗೂಡಿ ನಗರದ ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ವರ್ ಕುಮಾರ್ ಅವರ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಇರುವ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆಯಿಂದ ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಿ, ಪ್ರತಿಭಟನೆಯನ್ನು ಪೂರ್ಣಗೊಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande