ವಿಧಾನಸೌಧದ ಭುವನೇಶ್ವರಿ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪಾರ್ಚನೆ
ಬೆಂಗಳೂರು, 01 ನವೆಂಬರ್ (ಹಿ.ಸ.): ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ನಾಡದೇವಿ ಭುವನೇಶ್ವರಿಯ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ, ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಕನ್ನಡ ನಾಡು, ನುಡಿ, ನ
ವಿಧಾನಸೌಧದ ಭುವನೇಶ್ವರಿ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪಾರ್ಚನೆ


ಬೆಂಗಳೂರು, 01 ನವೆಂಬರ್ (ಹಿ.ಸ.):

ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ನಾಡದೇವಿ ಭುವನೇಶ್ವರಿಯ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ, ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿಯ ಅಸ್ಮಿತೆಯನ್ನು ಎತ್ತಿಹಿಡಿಯುವ ಈ ಸುದಿನ ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ದಿನವಾಗಿದೆ. ನಾವೆಲ್ಲರೂ ಕೈಜೋಡಿಸಿ ಕನ್ನಡ ಭಾಷೆಯ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸೋಣ ಎಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande