ಬಿಡಿಸಿಸಿಐನಲ್ಲಿ ಕನ್ನಡ ಧ್ವಜಾರೋಹಣ
ಬಳ್ಳಾರಿ, 01 ನವೆಂಬರ್ (ಹಿ.ಸ.) ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಹೂ ಮಾಲೆಯನ್ನು ಹಾಕಿ, ಪುಷ್ಪಾರ್ಚನೆ ಸಲ್ಲಿಸಿ ಕನ್ನಡ ಧ್ವಜಾರೋಹಣೆಯನ್ನು ನೆರವೇರಿಸಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ
Kannada flag hoisting at BDCCI


ಬಳ್ಳಾರಿ, 01 ನವೆಂಬರ್ (ಹಿ.ಸ.)

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಹೂ ಮಾಲೆಯನ್ನು ಹಾಕಿ, ಪುಷ್ಪಾರ್ಚನೆ ಸಲ್ಲಿಸಿ ಕನ್ನಡ ಧ್ವಜಾರೋಹಣೆಯನ್ನು ನೆರವೇರಿಸಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್ ಅವರು, ಕನ್ನಡ ಧ್ವಜಾರೋಹಣ ನೆರವೇರಿಸಿ, ದಕ್ಷಿಣ ಭಾರತದಲ್ಲಿಯ ಕನ್ನಡ ಭಾಷಿಕರು ಮತ್ತು ಕನ್ನಡ ಪ್ರಾಂತಗಳನ್ನು ಒಗ್ಗೂಡಿದ ದಿನ. ಮೈಸೂರು ಪ್ರಾಂತವನ್ನು `ಕರ್ನಾಟಕ' ಎಂದು ನಾಮಕರಣ ಮಾಡಲಾಯಿತು. ಕಾರಣ ನವೆಂಬರ್ 1ರನ್ನು ಪ್ರತೀ ವರ್ಷ ಕನ್ನಡ ರಾಜ್ಯೋತ್ಸವವನ್ನಾಗಿ ನಾಡಿನಾದ್ಯಂತ ಅದ್ದೂರಿಯಾಗಿ ಆಚರಿಸಲಾಗುತ್ತದೆ ಎಂದರು.

ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು, ನಮ್ಮ ನಾಡು, ನಮ್ಮ ನುಡಿ, ನಮ್ಮ ಸಂಸ್ಕøತಿಗಳ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ ಎಂದರು.

ಹಿರಿಯ ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಉಪಾಧ್ಯಾಕ್ಷರಾದ ಸೊಂತ ಗಿರಿಧರ, ಪಿ ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ, ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಮಾಜಿ ಅಧ್ಯಕ್ಷರಾದ ಡಾ.ಡಿ.ಎಲ್.ರಮೇಶ ಗೋಪಾಲ್, ವಿವಿಧ ಕಮಿಟಿಗಳ ಚೇರ್ಮನ್ಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande