
ನವದೆಹಲಿ, 10 ನವೆಂಬರ್ (ಹಿ.ಸ.):
ಚೆಸ್ ಕ್ರೀಡೆಯಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ದೇಶದ ಗ್ರ್ಯಾಂಡ್‌ಮಾಸ್ಟರ್‌ಗಳ ಸಂಖ್ಯೆ 100ಕ್ಕೆ ತಲುಪಿದೆ. ಭಾರತದ 100ನೇ ಚೆಸ್ ಗ್ರ್ಯಾಂಡ್‌ಮಾಸ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಅನುಜ್ ಶ್ರೀವಾಸ್ತವ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಸ ಹಂಚಿಕೊಂಡಿರುವ ಪ್ರಧಾನಿ ಮೋದಿ, ಭಾರತ ಚೆಸ್‌ನಲ್ಲಿ ಶತಕ ದಾಖಲಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ.
ದೇಶದಲ್ಲಿ 100 ಗ್ರ್ಯಾಂಡ್‌ಮಾಸ್ಟರ್‌ಗಳ ಸಾಧನೆಯು ಆಟಗಾರರ ಅಪಾರ ಪ್ರತಿಭೆ, ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ. ಯುವಜನರಲ್ಲಿ ಚೆಸ್ ಕ್ರೀಡೆಗೆ ಹೆಚ್ಚುತ್ತಿರುವ ಜನಪ್ರಿಯತೆಯೂ ಇದಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಯುವ ಚೆಸ್ ಪ್ರತಿಭೆಗಳು ಹೊರಹೊಮ್ಮಿ ಜಾಗತಿಕ ವೇದಿಕೆಯಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಈ ಸಾಧನೆಯು ಇನ್ನಷ್ಟು ಯುವಜನರಿಗೆ ಚೆಸ್ ಕ್ರೀಡೆಯನ್ನು ಆಯ್ದುಕೊಂಡು ಶ್ರೇಷ್ಠ ಸಾಧನೆ ಮಾಡುವ ಸ್ಫೂರ್ತಿ ನೀಡಲಿ ಎಂದು ಪ್ರಧಾನಿ ಆಶಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.