ನ. 13ರಂದು ಶಿವಮೊಗ್ಗದಲ್ಲಿ ಉದ್ಯೋಗಕ್ಕಾಗಿ ನೇರ ಸಂದರ್ಶನ
ಶಿವಮೊಗ್ಗ, 10 ನವೆಂಬರ್ (ಹಿ.ಸ.): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 13ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಈ ಸಂದರ್ಶನದಲ್ಲಿ ಸಾಯಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಖಾಸಗಿ ಕಂಪನಿ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನ
ನ. 13ರಂದು ಶಿವಮೊಗ್ಗದಲ್ಲಿ ಉದ್ಯೋಗಕ್ಕಾಗಿ ನೇರ ಸಂದರ್ಶನ


ಶಿವಮೊಗ್ಗ, 10 ನವೆಂಬರ್ (ಹಿ.ಸ.):

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 13ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಈ ಸಂದರ್ಶನದಲ್ಲಿ ಸಾಯಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಖಾಸಗಿ ಕಂಪನಿ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

ಐಟಿಐ ಹಾಗೂ ಯಾವುದೇ ವಿಷಯದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರುವ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಪ್ರವೇಶ ಉಚಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ ಪತ್ರ (ರೆಸ್ಯೂಮ್) ಹಾಗೂ ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಹಾಜರಾಗಬೇಕು.

ಶಿವಮೊಗ್ಗದ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ 9380663606 ಅಥವಾ 9108235132 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು. ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande