ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಧಾರವಾಡ, 10 ನವೆಂಬರ್ (ಹಿ.ಸ.) ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಮಹಿಳೆಯರು ಹಾಗೂ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ಧನಶ್ರೀ, ಚೇತನಾ, ಉದ್ಯೋಗಿನಿ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ಮಾಜಿ ದೇವ
ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ


ಧಾರವಾಡ, 10 ನವೆಂಬರ್ (ಹಿ.ಸ.)

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಮಹಿಳೆಯರು ಹಾಗೂ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ಧನಶ್ರೀ, ಚೇತನಾ, ಉದ್ಯೋಗಿನಿ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಡಿ ಸೌಲಭ್ಯ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಹರು ನವೆಂಬರ್ 30, 2026ರೊಳಗೆ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬೇಕು. ಧನಶ್ರೀ ಮತ್ತು ಚೇತನಾ ಯೋಜನೆಗಳಿಗೆ ಆನ್‌ಲೈನ್ ಹಾಗೂ ಆಫ್‌ಲೈನ್ ಎರಡೂ ವಿಧಾನಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, ಧಾರವಾಡವನ್ನು ಸಂಪರ್ಕಿಸಬಹುದು. ಅಥವಾ 0836-2447850 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande