ಸರ್ಕಾರಿ ಯೋಜನೆಗಳ ಸೌಲಭ್ಯ ವಿಳಂಬವಿಲ್ಲದೆ ತಲುಪಿಸಿ: ಡಿಸಿ
ಗದಗ, 12 ನವೆಂಬರ್ (ಹಿ.ಸ.) ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಳಂಬವಿಲ್ಲದೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ
ಫೋಟೋ


ಗದಗ, 12 ನವೆಂಬರ್ (ಹಿ.ಸ.)

ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಳಂಬವಿಲ್ಲದೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನ್ಯುವಲ್ ಸ್ಕ್ಯಾವೆಂಜರ್ಗಳ ಮೂರನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಅನೈರ್ಮಲ್ಯ ಶೌಚಾಲಯಗಳನ್ನು ಗುರುತಿಸಿ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಶಿಥಿಲಾವಸ್ಥೆಯಲ್ಲಿರುವ ಅನೈರ್ಮಲ್ಯ ಶೌಚಾಲಯಗಳ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು. ಪೌರಕಾರ್ಮಿಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಕಾರ್ಮಿಕರಿಗೂ ಗುತ್ತಿಗೆ ಏಜೆನ್ಸಿಗಳು ಸಕಾಲದಲ್ಲಿ ವೇತನ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪೌರಕಾರ್ಮಿಕರಿಗೆ ಗುಣಮಟ್ಟದ ಉಪಹಾರ, ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ಸ್ವಚ್ಛತಾ ಪರಿಕರಗಳನ್ನು ಒದಗಿಸುವಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಸ್ವಚ್ಛತಾ ಕಾರ್ಯದ ಸಂದರ್ಭದಲ್ಲಿ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಬಳಸುವ ಕುರಿತು ಕಾರ್ಮಿಕರಿಗೆ ಸೂಕ್ತ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಪೌರಕಾರ್ಮಿಕರ ವಿಶ್ರಾಂತಿಗಾಗಿ ಭೀಮಾಶ್ರಯ ವಿಶ್ರಾಂತಿ ಗೃಹ ನಿರ್ಮಾಣ, ವಸತಿ ಸೌಲಭ್ಯ ಕಲ್ಪಿಸುವುದು ಹಾಗೂ ಸಕಾಲದಲ್ಲಿ ವೇತನ ಪಾವತಿ ಮಾಡುವ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಎಸ್. ಕರಿಗೌಡ್ರ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಡಾ. ಶರಣು ಗೋಗೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande