ವಿಜಯಪುರ ಜಿಲ್ಲೆಯಾದ್ಯಂತ ವಿಜೃಂಭಣೆಯಿಂದ ಭಗವಾನ್ ಬಿರ್ಸಾ ಮುಂಡಾ ಜಯಂತಿ ಆಚರಣೆಗೆ ಸೂಚನೆ: ರಾಜು ಕೋಳಿ
ವಿಜಯಪುರ, 13 ನವೆಂಬರ್ (ಹಿ.ಸ.) ಬುಡಕಟ್ಟು ಸಮುದಾಯದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ವಿಜಯಪುರ ಜಿಲ್ಲೆಯಾದ್ಯಂತ ಅತ್ಯಂತ ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲು ಭಾರತೀಯ ಜನತಾ ಪಾರ್ಟಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಸಂಬಂಧ ವಿಜಯಪು
ಮುಂಡ ಜಯಂತಿ


ವಿಜಯಪುರ, 13 ನವೆಂಬರ್ (ಹಿ.ಸ.)

ಬುಡಕಟ್ಟು ಸಮುದಾಯದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ವಿಜಯಪುರ ಜಿಲ್ಲೆಯಾದ್ಯಂತ ಅತ್ಯಂತ ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲು ಭಾರತೀಯ ಜನತಾ ಪಾರ್ಟಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಸಂಬಂಧ ವಿಜಯಪುರ ನಗರದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಬಿಜೆಪಿ ಮುಖಂಡ ರಾಜು ಕೋಳಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು, ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಹೋರಾಡಿ ಬುಡಕಟ್ಟು ಜನರ ಹಕ್ಕುಗಳಿಗಾಗಿ ಪ್ರಾಣತ್ಯಾಗ ಮಾಡಿದ ಭಗವಾನ್ ಬಿರ್ಸಾ ಮುಂಡಾ ಅವರ ಆದರ್ಶಗಳನ್ನು ಇಂದಿನ ಯುವಜನತೆಗೆ ತಲುಪಿಸುವ ಅಗತ್ಯವಿದೆ ಎಂದರು. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಪ್ರತಿಯೊಂದು ಮಂಡಲದಲ್ಲೂ ಬಿರ್ಸಾ ಮುಂಡಾ ಅವರ ಜಯಂತಿಯನ್ನು ವಿಧ್ಯುಕ್ತವಾಗಿ ಆಚರಿಸಬೇಕು ಎಂದು ಜಿಲ್ಲೆಯ ಎಲ್ಲಾ ಮಂಡಲ ಅಧ್ಯಕ್ಷರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಮಾರ್ಗದರ್ಶನ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ, ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷರಾದ ರವಿ ವಗ್ಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಭಾರತ್ ಎಸ್. ಕೋಳಿ, ಈರಣ್ಣ ರೇವೂರ, ಕೃಷ್ಣ ಗುನ್ನಳಕರ್, ಶ್ರೀ ರಾಜೇಶ ತವುಸೆ ಹಾಗೂ ರಾಜಶೇಖರ ಡೊಳ್ಳಿ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸಿದ್ದರು.

ಜಿಲ್ಲೆಯ ಎಲ್ಲ ಕಾರ್ಯಕರ್ತರು ಮತ್ತು ಸಾರ್ವಜನಿಕರು ಬಿಸ್ರ್ಸಾ ಮುಂಡಾ ಅವರ ಜಯತ್ಯುತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮುಖಂಡರು ಈ ಸಂದರ್ಭದಲ್ಲಿ ಮನವಿ ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande