ರಾಷ್ಟ್ರೀಯ ಶಿಕ್ಷಣ ದಿನಾಚರಣೆ: ವಿಜಯಪುರದ ಹಿರಿಯ ಪತ್ರಕರ್ತ ರಫಿ ಭಂಡಾರಿ ಸೇರಿದಂತೆ 11 ಸಾಧಕರಿಗೆ ಪ್ರತಿಷ್ಠಿತ ‘ಮೌಲಾನಾ ಆಜಾದ್ ಪ್ರಶಸ್ತಿ’ ಪ್ರದಾನ!
ವಿಜಯಪುರ, 13 ನವೆಂಬರ್ (ಹಿ.ಸ.) ದೇಶದ ಮೊದಲ ಶಿಕ್ಷಣ ಸಚಿವರಾದ ಭಾರತ ರತ್ನ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ಯ ಪ್ರಯುಕ್ತ, ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬುಧವಾರ
ಸನ್ಮಾನ


ವಿಜಯಪುರ, 13 ನವೆಂಬರ್ (ಹಿ.ಸ.)

ದೇಶದ ಮೊದಲ ಶಿಕ್ಷಣ ಸಚಿವರಾದ ಭಾರತ ರತ್ನ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ಯ ಪ್ರಯುಕ್ತ, ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬುಧವಾರ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಶಿಕ್ಷಣ, ಪತ್ರಿಕೋದ್ಯಮ, ಸಾಹಿತ್ಯ ಹಾಗೂ ಸಾಮಾಜಿಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಕರ್ನಾಟಕದ 11 ಮಂದಿ ಸಾಧಕರಿಗೆ ಪ್ರತಿಷ್ಠಿತ ‘ಮೌಲಾನಾ ಆಜಾದ್ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಗುಮ್ಮಟನಗರಿ ವಿಜಯಪುರದ ಹೆಮ್ಮೆಯ ಪುತ್ರ, ಹಿರಿಯ ಪತ್ರಕರ್ತರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ರಫಿ ಭಂಡಾರಿ ಅವರು ಸ್ಥಾನ ಪಡೆದಿರುವುದು ಜಿಲ್ಲೆಯ ಜನತೆಗೆ ಅತೀವ ಸಂತಸ ಹಾಗೂ ಹೆಮ್ಮೆ ತಂದಿದೆ. ಪತ್ರಿಕೋದ್ಯಮ ಮತ್ತು ಶೈಕ್ಷಣಿಕ ವಲಯದಲ್ಲಿ ಅವರು ಸಲ್ಲಿಸಿರುವ ನಿಸ್ವಾರ್ಥ ಹಾಗೂ ದೀರ್ಘಕಾಲದ ಸೇವೆಯನ್ನು ಪರಿಗಣಿಸಿ ಸರ್ಕಾರ ಈ ಪ್ರತಿಷ್ಠಿತ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಗಣ್ಯರು, ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಆಧುನಿಕ ಭಾರತದ ಶಿಕ್ಷಣ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದ ಮಹಾನ್ ಚೇತನ. ಅವರ ಹೆಸರಿನಲ್ಲಿ ನೀಡಲಾಗುವ ಈ ಪ್ರಶಸ್ತಿಗೆ ಅರ್ಹ ಸಾಧಕರನ್ನು ಆಯ್ಕೆ ಮಾಡಲಾಗಿದೆ. ವಿಜಯಪುರದ ರಫಿ ಭಂಡಾರಿ ಅವರಂತಹ ಹಿರಿಯ ಪತ್ರಕರ್ತರು ಹಾಗೂ ಶಿಕ್ಷಣ ಪ್ರೇಮಿಗಳು ಈ ಗೌರವಕ್ಕೆ ಪಾತ್ರರಾಗಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಶಸ್ತಿ ಪುರಸ್ಕೃತರಾದ ರಫಿ ಭಂಡಾರಿ ಸೇರಿದಂತೆ ರಾಜ್ಯದ ಎಲ್ಲಾ 11 ಸಾಧಕರಿಗೂ ವಿಜಯಪುರ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳು, ಪತ್ರಕರ್ತರ ಬಳಗ, ಶಿಕ್ಷಣ ತಜ್ಞರು ಹಾಗೂ ಅಭಿಮಾನಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಶಿಕ್ಷಣ, ಜ್ಞಾನ ಪ್ರಸಾರ ಮತ್ತು ಸಾಮಾಜಿಕ ಸೇವೆಯ ಮೂಲಕ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡುತ್ತಿರುವ ಇಂತಹ ಸಾಧಕರ ಸೇವೆ ಇಂದಿನ ಯುವಪೀಳಿಗೆಗೆ ಹಾಗೂ ಮುಂದಿನ ತಲೆಮಾರಿಗೆ ಸದಾ ದಾರಿದೀಪ ಮತ್ತು ಸ್ಫೂರ್ತಿಯಾಗಲಿ ಎಂದು ಆಶಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande