
ಬೆಂಗಳೂರು, 14 ನವೆಂಬರ್ (ಹಿ.ಸ.):
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ಮತ್ತು ಪವಿತ್ರಾಗೌಡ ನಡುವಿನ ಮಾತುಕತೆಯ ಆಡಿಯೋ ರೆಕಾರ್ಡಿಂಗ್ ಇದೀಗ ಪ್ರಾಸಿಕ್ಯೂಷನ್ ಗಮನ ಸೆಳೆದಿದೆ.
ಆನ್‌ಲೈನ್‌ನಲ್ಲಿ ವಿಚಾರಣೆಗೆ ಸಂಪರ್ಕಗೊಂಡಿದ್ದವರಿಗೆ ದರ್ಶನ್ ಮತ್ತು ಪವಿತ್ರಾಗೌಡ ನಡುವಿನ ಸಂಭಾಷಣೆ ಕೇಳಿಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಮಾತುಕತೆ ಧ್ವನಿಮುದ್ರಣಗೊಂಡಿದ್ದು, ಇದೀಗ ಈ ಆಡಿಯೋ ಪ್ರಕರಣದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ.
ನ್ಯಾಯಾಧೀಶರ ಗಮನಕ್ಕೆ ತರಲು ಎಸ್ಪಿಪಿ ಸಿದ್ಧತೆ?
ದರ್ಶನ್ ಮತ್ತು ಪವಿತ್ರಾಗೌಡ ನಡುವಿನ ಮಾತುಕತೆಯ ಆಡಿಯೋ ತುಣುಕನ್ನು ವಿಶೇಷ ಸರ್ಕಾರಿ ಅಭಿಯೋಜಕರು (ಎಸ್ಪಿಪಿ) ನ್ಯಾಯಾಧೀಶರ ಗಮನಕ್ಕೆ ತರಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸೋಮವಾರ ನಡೆಯಲಿರುವ ವಿಚಾರಣೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸುವ ಸಾಧ್ಯತೆಯಿದ್ದು, ಇಬ್ಬರ ನಡುವಿನ ಸಂಭಾಷಣೆಯ ಧ್ವನಿಮುದ್ರಣವನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ.
ಇನ್ನು ತಮ್ಮ ಮಾತುಕತೆಯ ಆಡಿಯೋ ವೈರಲ್ ಆಗಿರುವ ವಿಚಾರ ದರ್ಶನ್ ಮತ್ತು ಪವಿತ್ರಾಗೌಡ ಅವರಿಗೆ ತಡವಾಗಿ ತಿಳಿದುಬಂದಿದೆ ಎನ್ನಲಾಗಿದೆ. ಜೈಲು ಸಿಬ್ಬಂದಿ ಮೂಲಕ ಈ ವಿಷಯ ಇಬ್ಬರ ಗಮನಕ್ಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R