
ನವದೆಹಲಿ, 15 ನವೆಂಬರ್ (ಹಿ.ಸ.):
ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ಪರವಾಗಿ ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಜನಜಾತೀಯ ಗೌರವ ದಿನದ ಶುಭಾಶಯಗಳನ್ನು ದೇಶವಾಸಿಗಳಿಗೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಬಿರ್ಸಾ ಮುಂಡಾ ಅವರ ಅಪ್ರತಿಮ ಧೈರ್ಯ, ಹೋರಾಟ ಮತ್ತು ತ್ಯಾಗವು ದೇಶದ ಪ್ರತಿಯೊಂದು ಪೀಳಿಗೆಯನ್ನೂ ಸ್ವಾಭಿಮಾನ, ಸ್ವಾತಂತ್ರ್ಯ ಹಾಗೂ ಹಕ್ಕುಗಳ ರಕ್ಷಣೆಗಾಗಿ ನಿರಂತರವಾಗಿ ಪ್ರೇರೇಪಿಸಲಿದೆ ಎಂದು ಹೇಳಿದ್ದಾರೆ.
ಬಿರ್ಸಾ ಮುಂಡಾ ಅವರ ಆದರ್ಶಗಳಿಂದ ಸ್ಫೂರ್ತಿ ಪಡೆದು, ತಮ್ಮ ಸರ್ಕಾರ ಬುಡಕಟ್ಟು ಸಮುದಾಯದ ಸಹೋದರ ಸಹೋದರಿಯರ ಗೌರವ, ಅವಕಾಶಗಳು ಮತ್ತು ಸಮೃದ್ಧಿಗಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರ ನಿರ್ಮಾಣದಲ್ಲಿ ಬುಡಕಟ್ಟು ಸಮುದಾಯ ನೀಡಿರುವ ಅಮೂಲ್ಯ ಕೊಡುಗೆಯನ್ನು ಸ್ಮರಿಸಿ, ಎಲ್ಲರೂ ಒಗ್ಗಟ್ಟಿನಿಂದ ಗೌರವ ಸಲ್ಲಿಸೋಣ ಎಂದು ಪ್ರಧಾನಿ ಕರೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.