
ಬೆಂಗಳೂರು, 15 ನವೆಂಬರ್ (ಹಿ.ಸ.):
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಂಜೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಂಗಳವಾರ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.