ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ
ಕುಲ್ಗಾಂ, 16 ನವೆಂಬರ್ (ಹಿ.ಸ.): ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ಪೊಲೀಸ್ ಮತ್ತು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಕುಲ್ಗಾಮ್ ಜಿಲ್ಲೆಯ ಮಿರ್ ಬಜಾರ್ ಪ್ರದೇಶದಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆಯ ಠಾಣೆಯ ಮೇಲೆ ಕಳೆದ ವಾರ ಉಗ್ರರು
ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ


ಕುಲ್ಗಾಂ, 16 ನವೆಂಬರ್ (ಹಿ.ಸ.):

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ಪೊಲೀಸ್ ಮತ್ತು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಕುಲ್ಗಾಮ್ ಜಿಲ್ಲೆಯ ಮಿರ್ ಬಜಾರ್ ಪ್ರದೇಶದಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆಯ ಠಾಣೆಯ ಮೇಲೆ ಕಳೆದ ವಾರ ಉಗ್ರರು ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರು. ಈ ಘಟನೆಯ ಬಳಿಕ ಭದ್ರತಾ ಪಡೆಗಳು ಉಗ್ರರ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದವು.

ಕುಲ್ಗಾಮ್‌ನ ಲಾರು ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳು ಜಂಟಿಯಾಗಿ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದವು. ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಇದರಿಂದ ಎರಡೂ ಕಡೆಯ ನಡುವೆ ಗುಂಡಿನ ಚಕಮಕಿ ಆರಂಭವಾಯಿತು.

ಆರಂಭಿಕ ಗುಂಡಿನ ಚಕಮಕಿಯಲ್ಲಿ ಸ್ಥಳೀಯನೊಬ್ಬ ಸೇರಿದಂತೆ ಇಬ್ಬರು ಉಗ್ರರು ಹತರಾಗಿದ್ದಾರೆ. ಹತರಾದ ಉಗ್ರರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ಇಬ್ಬರು ಉಗ್ರರಲ್ಲಿ ದಕ್ಷಿಣ ಕಾಶ್ಮೀರದ ಲಾರು ಪ್ರದೇಶದ ಲಷ್ಕರ್-ಎ-ತೊಯ್ಬಾ ಸಂಘಟನೆಯ ಕಮಾಂಡರ್ ಲತೀಫ್ ಭಟ್ ಕೂಡ ಸೇರಿದ್ದಾನೆ ಎಂದು ಶಂಕಿಸಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ದೃಢೀಕರಣ ದೊರೆತಿಲ್ಲ.

ಕಾರ್ಯಾಚರಣೆ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಶೋಧ ಕಾರ್ಯ ಮುಂದುವರಿದಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande