ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಸೇನಾ ತರಬೇತಿ ನೀಡುವ ಬಗ್ಗೆ ವಿಶ್ವಹಿಂದೂಪರಿಷತ್ ವಿರೋಧ
ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಸೇನಾ ತರಬೇತಿ ನೀಡುವ ಬಗ್ಗೆ ವಿಶ್ವಹಿಂದೂಪರಿಷತ್ ವಿರೋಧ
ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಸೇನಾ ತರಬೇತಿ ನೀಡುವ ರಾಜ್ಯ ಸರ್ಕಾರದ ಯೋಜನೆಯನ್ನು ವಿರೋಧಿಸಿ ಕೋಲಾರ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿ0ದ ಪ್ರತಿಭಟನೆ ನಡೆಸಲಾಯಿತು.


ಕೋಲಾರ, 16 ನವೆಂಬರ್ (ಹಿ.ಸ.)

ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಸೇನಾ ತರಬೇತಿ ನೀಡುವ ಟೆಂಡರ್ ರದ್ದುಗೊಳಿಸುವಂತೆ ಆಗ್ರಹಿಸಿ ವಿಶ್ವ ಹಿಂದೂಪರಿಷತ್ ಹಾಗೂ ಬಜರಂಗದಳದಿAದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ಸರ್ಕಾರದ ವಿವಿಧ ಆದೇಶಗಳು ಹಾಗೂ ಯೋಜನೆಗಳಲ್ಲಿ ಧಾರ್ಮಿಕ ತಾರತಮ್ಯಕ್ಕೆ ಅವಕಾಶ ನೀಡಬಾರದು. ಎಲ್ಲ ಸಮುದಾಯಗಳ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕೋಲಾರ ಜಿಲ್ಲಾ ಘಟಕದ ಒತ್ತಾಯಿಸಲಾಯಿತು. ಕರ್ನಾಟಕ ಧಾರ್ಮಿಕ ಸ್ವಾತಂತ್ರ÷್ಯ ಸಂರಕ್ಷಣಾ ಕಾಯ್ದೆ-೨೦೨೨ ಹಾಗೂ ಕರ್ನಾಟಕ ಜನಸಾಮಾನ್ಯರ ಹಕ್ಕು ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-೨೦೨೦ಗಳನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಿಕೊಳ್ಳದೆ ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಹಿಂದೂಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯವು ೨೦೨೬-೨೭ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ೬೦ ದಿನಗಳ ಸೇನಾ ತರಬೇತಿ ನೀಡಲು ಅಲ್ಪಾವಧಿ ಟೆಂಡರ್ ಕರೆದಿರುವುದಕ್ಕೆ ಹಿಂದೂಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿ, ಇಂತಹ ಯೋಜನೆಗಳನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸುವ ಬದಲು ಎಲ್ಲ ಸಮುದಾಯಗಳ ವಿದ್ಯಾರ್ಥಿಗಳಿಗೂ ಸಮಾನ ಅವಕಾಶ ಕಲ್ಪಿಸಬೇಕು. ಸಂವಿಧಾನದ ಸಮಾನತೆಯ ಆಶಯಕ್ಕೆ ವಿರುದ್ಧವಾದ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು. ಅಲ್ಲದೆ, ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಶಿಸ್ತು, ದೇಶಭಕ್ತಿ ಹಾಗೂ ರಾಷ್ಟಿçÃಯ ಭಾವನೆ ಬೆಳೆಸುವ ನಿಟ್ಟಿನಲ್ಲಿ ರಾಷ್ಟಿçÃಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಸೇರಿದಂತೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಎಲ್ಲ ವಿದ್ಯಾರ್ಥಿಗಳಿಗೂ ಸಮಾನವಾಗಿ ವಿಸ್ತರಿಸಬೇಕು ಎಂದು ಆಗ್ರಹಿಸಲಾಯಿತು.

೧೯೭೭ರಿಂದ ದೇಶದಲ್ಲಿ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳ ಮೂಲಕ ಸಂಘಟನೆ ಕಾರ್ಯನಿರ್ವಹಿಸುತ್ತಿದ್ದು, ಹಿಂದೂ ಸಮಾಜದ ಸಂಘಟನೆ, ಧಾರ್ಮಿಕ ಸ್ವಾತಂತ್ರ÷್ಯ ಮತ್ತು ಸಾಂಸ್ಕತಿಕ ಪರಂಪರೆಯ ರಕ್ಷಣೆಗೆ ಶ್ರಮಿಸುತ್ತಿದೆ. ಸಮಾಜದಲ್ಲಿ ಸಾಮರಸ್ಯ ಹಾಗೂ ಸಮಾನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕೋಲಾರ ಜಿಲ್ಲಾ ಘಟಕ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಬಿಆರ್ಎಂ ಸಂತೋಷ್, ಬಜರಂಗದಳ ವಿಭಾಗ ಸಂಯೋಜಕ ಬಜರಂಗದಳ ಬಾಬಣ್ಣ, ಬಾಲಾಜಿ, ವಿಹಿಂಪ ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ, ರಾಮಣ್ಣ, ವಿಹಿಂಪ ಜಿಲ್ಲಾ ಕಾರ್ಯದರ್ಶಿ ತಾಂಡವ ಮೂರ್ತಿ, ಜಿಲ್ಲಾ ಸಹ ಕಾರ್ಯದರ್ಶಿ ಚಂದ್ರಶೇಖರ್, ಮಂಜಣ್ಣ ಮುದ್ದಪ್ಪ , ಮತ್ತು ಬಜರಂಗದಳ ಕಾರ್ಯಕರ್ತರಾದ, ಓಂ, ತುಳಸಿ ರಾಮ್, ಭವಾನಿ, ಹರಿ, ಶ್ರೀಧರ್, ಬಂಗಾರಪೇಟೆ ವಿಶೂ , ವಿಶಾಕ , ದೇವರಾಜ್, ಅರವಿಂದ್ ಮತ್ತಿತರರು ಹಾಜರಿದ್ದರು.

-

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande