
ಕೋಲಾರ, 16 ನವೆಂಬರ್ (ಹಿ.ಸ.)
ಸಂಸತ್ತು ಮತ್ತು ವಿಧಾನಸಭೆ, ವಿಧಾನ ಪÀರಿಷತ್ ಕಲಾಪಗಳು ಕೇವಲ ಚರ್ಚೆ ನಡೆಸುವ ಸ್ಥಳಗಳಲ್ಲ. ಬದಲಿಗೆ ಜನರ ಧ್ವನಿಗೆ ಸ್ಪಂದಿಸುವ ಹಾಗೂ ಪವಿತ್ರವಾದ ಪ್ರಜಾಪ್ರಭುತ್ವದ ಜೀವಂತ ವೇದಿಕೆಗಳಾಗಿವೆ ಎಂದು ಕೋಲಾರ ವಿಧಾನಸಭಾ ಶಾಸಕರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಕೊತ್ತೂರು ಜಿ ಮಂಜುನಾಥ್ ಅಭಿಪ್ರಾಯಪಟ್ಟರು.
ಕೋಲಾರ ನಗರದ ವಾಲ್ಮೀಕಿ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನಪ್ರತಿನಿಧಿಗಳು ಮತ್ತು ಆಡಳಿತ ವರ್ಗದ ಅಧಿಕಾರಿಗಳು ಹಗಲಿರುಳು ಜನಪರ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದು ತಿಳಿಸುತ್ತಾ, ಯುವ ಜನತೆ ಪ್ರಜಾಪ್ರಭುತ್ವದ ನಿಜವಾದ ಶಕ್ತಿಯಾಗಿ ರೂಪುಗೊಂಡು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳು ಮತ್ತು ಸಂವಿಧಾನದ ಪೀಠಿಕೆಯಲ್ಲಿರುವ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಲು ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದರು.
ಕೋಲಾರ ಲೋಕಸಭಾ ಕ್ಷೇತ್ರದ ಸದಸ್ಯ ಎಂ. ಮಲ್ಲೇಶ್ ಬಾಬು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಪಾತ್ರ ಹಾಗೂ ಅವುಗಳ ಕಾರ್ಯವೈಖರಿಯ ಕುರಿತು ವಿಸ್ತಾರವಾಗಿ ವಿವರಿಸಿದರು. ದೇಶದ ಅಭಿವೃದ್ಧಿ ಕೇವಲ ಭೌತಿಕ ರಚನೆಗಳಿಂದ ಮಾತ್ರ ಸಾಧ್ಯವಿಲ್ಲ, ಬದಲಿಗೆ ಯುವಜನತೆಯ ಉತ್ತಮ ಆಲೋಚನೆಗಳು, ನಾಯಕತ್ವ ಸಾಮರ್ಥ್ಯ ಹಾಗೂ ಸಂವಿಧಾನ ಬದ್ಧ ಚಿಂತನೆಗಳಿAದ ಮಾತ್ರ ದೇಶ ಮುನ್ನಡೆಯಲು ಸಾಧ್ಯ ಎಂದು ತಿಳಿಸಿದರು. ವಿದ್ಯಾರ್ಥಿಗಳು ಇಂದಿನಿ0ದಲೇ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಆಳವಾಗಿ ಅಧ್ಯಯನ ಮಾಡಿ, ಭವಿಷ್ಯದಲ್ಲಿ ಅತ್ಯುತ್ತಮ ಶಾಸಕರು, ಸಂಸದರು ಹಾಗೂ ಜವಾಬ್ದಾರಿಯುತ ನಾಯಕರಾಗಿ ಬೆಳೆಯಬೇಕು ಎಂದು ಹಾರೈಸಿದರು.
ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಯ್ಕೆಯಾಗಿ ಬಂದಿರುವ ಪ್ರತಿಭಾವಂತ ವಿದ್ಯಾರ್ಥಿಗಳು ಈ ಯುವ ಸಂಸತ್ ಕಾರ್ಯಕ್ರಮದಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಸರ್ಕಾರದ ಮಾರ್ಗಸೂಚಿಯಂತೆ ತಾಲೂಕು ಮಟ್ಟದಿಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಹಾಗೂ ಅಲ್ಲಿಂದ ಅತ್ಯುತ್ತಮ ಪ್ರತಿಭೆಗಳನ್ನು ಮೈಸೂರಿನಲ್ಲಿ ಜರುಗಲಿರುವ ರಾಜ್ಯಮಟ್ಟದ ಯುವ ಸಂಸತ್ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿ ಕಳುಹಿಸಿಕೊಡಲಾಗುತ್ತಿದ್ದು, ಇದು ವಿದ್ಯಾರ್ಥಿಗಳಿಗೆ ಸಿಕ್ಕಿರುವ ಸುವರ್ಣ ಅವಕಾಶವಾಗಿದೆ ಎಂದು ತಿಳಿಸಿದರು. ಯುವಜನತೆಯಲ್ಲಿ ನಾಯಕತ್ವ ಗುಣಗಳು, ಸಂವಿಧಾನದ ಅರಿವು ಮತ್ತು ಜವಾಬ್ದಾರಿಯನ್ನು ಬೆಳೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಪ್ರೋತ್ಸಾಹ ಹಾಗೂ ಸಹಕಾರ ನೀಡಲಾಗುವುದು ಎಂದು ಅವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್