ಬಳ್ಳಾರಿ ಗ್ರಾಮಾಂತರ : ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಬಳ್ಳಾರಿ, 18 ನವೆಂಬರ್ (ಹಿ.ಸ.) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬಳ್ಳಾರಿ ಗ್ರಾಮಾಂತರ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 08 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸ
ಬಳ್ಳಾರಿ ಗ್ರಾಮಾಂತರ : ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ


ಬಳ್ಳಾರಿ, 18 ನವೆಂಬರ್ (ಹಿ.ಸ.)

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬಳ್ಳಾರಿ ಗ್ರಾಮಾಂತರ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 08 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-12-2026 ರ ಸಂಜೆ 5:30 ರವರೆಗೆ.

ಖಾಲಿ ಇರುವ ಅಂಗನವಾಡಿ ಕೇಂದ್ರಗಳ ಸಹಾಯಕಿ ಹುದ್ದೆಗಳ ವಿವರಗಳನ್ನು ಯೋಜನಾಧಿಕಾರಿಗಳ ಕಚೇರಿ, ಆಯಾ ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿಗಳನ್ನು ಪಡೆದು, ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.

ಕಚೇರಿ ವೇಳೆಯಲ್ಲಿ ಹೆಚ್ಚಿನ ಮಾಹಿತಿಗಾಗಿ ಹಾಗೂ ಸಹಾಯಕ್ಕಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಳ್ಳಾರಿ (ಗ್ರಾಮಾಂತರ) ಅಥವಾ ದೂರವಾಣಿ ಸಂಖ್ಯೆಗಳಾದ 8971982008, 08392-266080 ಗೆ ಸಂಪರ್ಕಿಸಬಹುದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande