
ಮೈಸೂರು, 18 ನವೆಂಬರ್ (ಹಿ.ಸ.):
ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಮಾಡುವ ವಿಚಾರದಲ್ಲಿ ಸಚಿವ ರಿಜ್ವಾನ್ ಅವರು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟ್ರೋಲಿಯಂ ಕಂಪನಿಗಳು ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುವ ಅಗತ್ಯವಿಲ್ಲ. ಸಚಿವ ರಿಜ್ವಾನ್ ಅವರು ಯಾವ ಪೆಟ್ರೋಲಿಯಂ ಟರ್ಮಿನಲ್ನಿಂದ ಮಾದರಿ ಸಂಗ್ರಹಿಸಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು.
ಸ್ಯಾಂಪಲ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಯಾವೆಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು ಎಂಬ ಮಾಹಿತಿಯನ್ನೂ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ಎಥೆನಾಲ್ ಮಿಶ್ರಿತ ಪೆಟ್ರೋಲ್ನ ಗುಣಮಟ್ಟವನ್ನು ಪರೀಕ್ಷಿಸಲು ಸಚಿವ ರಿಜ್ವಾನ್ ಅವರು ಸ್ವತಂತ್ರ ಸಮಿತಿಯೊಂದನ್ನು ರಚಿಸಬೇಕು. ಸಮಿತಿಯ ಮೂಲಕ ವೈಜ್ಞಾನಿಕವಾಗಿ ಮಾದರಿಗಳ ಪರೀಕ್ಷೆ ನಡೆಸಿ ವಾಸ್ತವಾಂಶವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಎಥೆನಾಲ್ ಮಿಶ್ರಣದಿಂದ ವಾಹನಗಳ ಮೈಲೇಜ್ನಲ್ಲಿ ಶೇ.4ರಿಂದ 5ರಷ್ಟು ಕಡಿಮೆಯಾಗುತ್ತದೆ ಎಂಬುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಆದರೆ, ಇದರಿಂದ ಪೆಟ್ರೋಲ್ ಬಂಕ್ಗಳಿಗೆ ಅಥವಾ ಪೆಟ್ರೋಲಿಯಂ ಟರ್ಮಿನಲ್ಗಳಿಗೆ ಯಾವುದೇ ಹೆಚ್ಚುವರಿ ಲಾಭವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಪ್ರತಿಕ್ರಿಯಿಸಿದ ಮುರುಗೇಶ್ ನಿರಾಣಿ, ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ಹೈಕಮಾಂಡ್ ಜವಾಬ್ದಾರಿ ನೀಡಿದರೆ ಅದನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಕಾರ್ಯವೈಖರಿ ಚೆನ್ನಾಗಿದೆ. ಹೀಗಾಗಿ ಹೈಕಮಾಂಡ್ ವಿಜಯೇಂದ್ರ ಅವರನ್ನೇ ಮುಂದುವರಿಸಬಹುದು ಅಥವಾ ಅಗತ್ಯವೆನಿಸಿದರೆ ಬದಲಾವಣೆ ಮಾಡಬಹುದು. ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R