ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ವೇಳಾಪಟ್ಟಿ ಪ್ರಕಟ
ಬಳ್ಳಾರಿ, 18 ನವೆಂಬರ್ (ಹಿ.ಸ.) ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2027ನೇ ಸಾಲಿನ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದ ವೇಳಾಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯವು ಪ್ರಕಟಿಸಿದ್ದು, ಅರ್ಹ ಮತದಾರರು ಈ ಪ್ರಕ್ರಿಯೆಯ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಚುನಾ
Special Summary Revision of Electoral Rolls


ಬಳ್ಳಾರಿ, 18 ನವೆಂಬರ್ (ಹಿ.ಸ.)

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2027ನೇ ಸಾಲಿನ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದ ವೇಳಾಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯವು ಪ್ರಕಟಿಸಿದ್ದು, ಅರ್ಹ ಮತದಾರರು ಈ ಪ್ರಕ್ರಿಯೆಯ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

*ದಿನಾಂಕಗಳ ವಿವರ:*

ಮತಗಟ್ಟೆಗಳ ತಾರ್ಕೀಕರಣ: ನವೆಂಬರ್ 23, 2026ರೊಳಗೆ ಪೂರ್ಣಗೊಳ್ಳಲಿದೆ.

ಸಂಯೋಜಿತ ಕರಡು ಮತದಾರರ ಪಟ್ಟಿ ಪ್ರಕಟಣೆ: ಡಿಸೆಂಬರ್ 01, 2026.

ಆಕ್ಷೇಪಣೆ ಹಾಗೂ ಹಕ್ಕುಗಳ ಸಲ್ಲಿಕೆ ಅವಧಿ: ಡಿಸೆಂಬರ್ 01 ರಿಂದ ಡಿಸೆಂಬರ್ 31 ರವರೆಗೆ.

ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ: ಜನವರಿ 14, 2027ರೊಳಗೆ.

ಅಂತಿಮ ಮತದಾರರ ಪಟ್ಟಿ ಪ್ರಕಟಣೆ: ಜನವರಿ 20, 2027.

*ಅರ್ಜಿಗಳ ಸಲ್ಲಿಕೆ ವಿವರ:*

ಹೊಸ ಹೆಸರು ಸೇರ್ಪಡೆ: ಅರ್ಹತಾ ದಿನಾಂಕಗಳಾದ 01.01.2027, 01.04.2027, 01.07.2027 ಹಾಗೂ 01.10.2027ಕ್ಕೆ 18 ವರ್ಷ ಪೂರ್ಣಗೊಂಡ ಅಥವಾ ಪೂರ್ಣಗೊಳ್ಳುವ ಎಲ್ಲಾ ಅರ್ಹ ಹಾಗೂ ನಿರೀಕ್ಷಿತ ಮತದಾರರು ನಮೂನೆ-6ನ್ನು ತಮ್ಮ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಅಥವಾ ತಾಲೂಕು ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ.

ತಿದ್ದುಪಡಿಗಳಿಗೆ: ಹೆಸರು, ವಿಳಾಸ, ಭಾವಚಿತ್ರ ಹಾಗೂ ಇನ್ನೀತರೆ ವಿವರಗಳ ತಿದ್ದುಪಡಿಗೆ ನಮೂನೆ-8 ಅರ್ಜಿ ಸಲ್ಲಿಸಬಹುದು.

ಹೆಸರು ತೆಗೆದುಹಾಕಲು: ಮರಣ ಹೊಂದಿದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಸಂಬಂಧಿಕರು ನಮೂನೆ-7ರ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಬಳ್ಳಾರಿ ಜಿಲ್ಲೆಯ ಎಲ್ಲಾ ಅರ್ಹ ಮತದಾರರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸಹಕರಿಸಬೇಕಾಗಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande