
ವಿಜಯಪುರ, 18 ನವೆಂಬರ್ (ಹಿ.ಸ.)
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮಣ ಬಿ. ನಿಂಬರಗಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಬೆಂಗಳೂರಿನ ಸಿಟಿ ಆರ್ಮ್ಡ್ ರಿಸರ್ವ್ (ಸಿಎಆರ್) ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ನೇಮಕ ಮಾಡಿದೆ.
ವಿಜಯಪುರ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಲಕ್ಷ್ಮಣ ಬಿ. ನಿಂಬರಗಿ ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದರು. ವಿಶೇಷವಾಗಿ ಭೀಮಾತೀರದ ರೌಡಿಶೀಟರ್ಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿ, ಅಪರಾಧ ಚಟುವಟಿಕೆಗಳ ನಿಯಂತ್ರಣಕ್ಕೆ ಆದ್ಯತೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಭೀಮಾತೀರದ ರೌಡಿಶೀಟರ್ಗಳಿಗೆ ಸಿಂಹಸ್ವಪ್ನವಾಗಿದ್ದರು ಎಂಬ ಹೆಗ್ಗಳಿಕೆ ಗಳಿಸಿದ್ದರು ಎಂದು ಸ್ಥಳೀಯ ಮುಖಂಡ ರಾಘವ ಅಣ್ಣಿಗೇರಿ ಹೇಳಿದರು
ಇದರ ಜೊತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು, ಪೊಲೀಸ್ ಇಲಾಖೆ ಮತ್ತು ಜನರ ನಡುವಿನ ಸಂಪರ್ಕವನ್ನು ಬಲಪಡಿಸುವುದು ಹಾಗೂ ಜನಸ್ನೇಹಿ ಪೊಲೀಸ್ ಕಾರ್ಯವೈಖರಿಯ ಮೂಲಕ ಜಿಲ್ಲೆಯ ಜನರ ಗಮನ ಸೆಳೆದಿದ್ದರು.
ಇದೀಗ ರಾಜ್ಯ ಸರ್ಕಾರ ಅವರನ್ನು ಬೆಂಗಳೂರಿನ ಸಿಟಿ ಆರ್ಮ್ಡ್ ರಿಸರ್ವ್ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಿದ್ದು, ಹೊಸ ಜವಾಬ್ದಾರಿಯನ್ನು ವಹಿಸಿದೆ. ವಿಜಯಪುರದಲ್ಲಿ ಅವರ ಸೇವೆ ಮತ್ತು ಕಾರ್ಯವೈಖರಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande