ಮಹಿಳೆಯರು ಪಕ್ಷದ ಬಲವರ್ಧನೆಗೆ ಶ್ರಮಿಸಲು ಶಾಸಕ ಕೊತ್ತೂರು ಮಂಜುನಾಥ್ ಕರೆ
ಮಹಿಳೆಯರು ಪಕ್ಷದ ಬಲವರ್ಧನೆಗೆ ಶ್ರಮಿಸಲು ಶಾಸಕ ಕೊತ್ತೂರು ಮಂಜುನಾಥ್ ಕರೆ
ಕೋಲಾರ ನಗರ ಮತ್ತು ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಾಸಕ ಕೊತ್ತೂರು ಮಂಜುನಾಥ್ ನೇಮಕಾತಿ ಪತ್ರಗಳನ್ನು ನೀಡಿದರು.


ಕೋಲಾರ, 02 ನವೆಂಬರ್ (ಹಿ.ಸ.):

ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷದ ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ ಮಹಿಳೆಯರ ಸಮಸ್ಯೆಗಳನ್ನು ಗುರುತಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಕಟ್ಟಕಡೆಯ ಮಹಿಳೆಯ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ಕರೆ ನೀಡಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷರಿಗೆ ನೇಮಕಾತಿ ಪ್ರಮಾಣಪತ್ರ ವಿತರಣೆ ಮಾಡಿ ಮಾತನಾಡಿದರು. ಮಹಿಳೆಯರು ಸಂಘಟಿತರಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ವಿವಿಧ ಸಾಲ ಸೌಲಭ್ಯಗಳು ಹಾಗೂ ಜನಪರ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು.

ಇಂದಿರಾಗಾಂಧಿ ಮಮತಾ ಬ್ಯಾನರ್ಜಿ, ಜಯಲಲಿತಾ, ಮಾಯಾವತಿ, ಸುಷ್ಮಾ ಸ್ವರಾಜ್ ಸೇರಿದಂತೆ ಹಲವು ಮಹಿಳಾ ನಾಯಕಿಯರು ಅಧಿಕಾರದ ಚುಕ್ಕಾಣಿ ಹಿಡಿದು ಧೈರ್ಯದಿಂದ ಜನಪರ ಕೆಲಸಗಳನ್ನು ಮಾಡಿದ್ದಾರೆ. ಮಹಿಳೆಯರು ರಾಜಕೀಯದಲ್ಲಿ ಮುಂಚೂಣಿಗೆ ಬರಬೇಕು ಮಹಿಳೆಯರಿಗೆ ಶೇ.೫೦ರಷ್ಟು ಮೀಸಲಾತಿ ಅವಕಾಶವಿದ್ದು, ಅದನ್ನು ಸಮರ್ಥವಾಗಿ ಬಳಸಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿ ಅಧಿಕಾರ ಪಡೆಯಬೇಕು. ಮಹಿಳೆಯರು ಅಧಿಕಾರಕ್ಕೆ ಬಂದಾಗ ಮಾತ್ರ ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಬೆಟ್ಟದಂತೆ ಇದ್ದು, ಪಕ್ಷದ ಆಶ್ರಯದಲ್ಲಿ ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಬಹುದು. ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಪಕ್ಷದ ಮೇಲಿನ ಜನರ ವಿಶ್ವಾಸವನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ರಾಜಕೀಯದಲ್ಲಿ ಆದ್ಯತೆ ಹಾಗೂ ಅವಕಾಶಗಳನ್ನು ನೀಡುತ್ತಾ ಬಂದಿದೆ. ಮೋಟಮ್ಮ ಅವರ ಪ್ರೇರಣೆಯಿಂದ ಸ್ತ್ರೀಶಕ್ತಿ ಸಂಘಗಳ ರಚನೆಗೆ ಉತ್ತೇಜನ ದೊರೆಯಿತು. ಮೀಸಲಾತಿ ಅವಕಾಶಗಳನ್ನು ಬಳಸಿಕೊಂಡು ಮಹಿಳೆಯರು ಪಂಚಾಯಿತಿಯಿಂದ ಹಿಡಿದು ಉನ್ನತ ಮಟ್ಟದವರೆಗೆ ಆಡಳಿತದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಈಗಾಗಲೇ ಅಧಿಕಾರ ನಿರ್ವಹಿಸಿದವರ ಅನುಭವದೊಂದಿಗೆ ಹೊಸಬರನ್ನೂ ಸಂಘಟನೆಗೆ ಸೇರಿಸಿಕೊಂಡು ಎಲ್ಲ ವರ್ಗದ ಮಹಿಳೆಯರಿಗೆ ಅವಕಾಶ ಕಲ್ಪಿಸಬೇಕು ಎಂದರು.

ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಂಜುಳಾ ಸುರೇಶ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸಂಗೀತಾ ಜಿಲ್ಲಾ ಉಪಾಧ್ಯಕ್ಷರಾಗಿ ಮಂಗಳ ಅವರಿಗೆ ನೇಮಕಾತಿ ಪ್ರಮಾಣಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ. ಶಿವಕುಮಾರ್, ಹಿರಿಯ ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ವೆಂಕಟಪತಿಯಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಬ್ಲಾಕ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಆಫ್ಸರ್, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಕುರಿಗಳ ರಮೇಶ್, ಕೆಜಿಎಫ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಳಿನಾ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande