
ಕೋಲಾರ, 02 ನವೆಂಬರ್ (ಹಿ.ಸ.):
ಕೋಲಾರ ಜಿಲ್ಲೆಯಿಂದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ೬೩ ವಿದ್ಯಾರ್ಥಿಗಳು ಹಾಗೂ ಮೂವರು ವ್ಯವಸ್ಥಾಪಕರು ತೆರಳಿದ್ದು, ಅವರನ್ನು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಅಲ್ಮಾಸ್ ಫರ್ವೀನ್ ತಾಜ್ ಅಭಿನಂದಿಸಿ ಬೀಳ್ಕೊಟ್ಟರು.
ನಗರದ ಡಿಡಿಪಿಐ ಕಚೇರಿ ಮುಂಭಾಗ ಸಮವಸ್ತç ವಿತರಿಸಿ, ಮಕ್ಕಳನ್ನು ಬೀಳ್ಕೊಟ್ಟು ಮಾತನಾಡಿದ ಅವರು, ಕ್ರೀಡೆಗಳು ಸಹಾ ಸಮಗ್ರ ಶಿಕ್ಷಣದ ಭಾಗವಾಗಿದೆ, ಮಕ್ಕಳು ರಾಜ್ಯಮಟ್ಟದಲ್ಲಿ ಸಾಧನೆ ಮಾಡಿ ಜಿಲ್ಲೆಯ ಘನತೆ ಹೆಚ್ಚಿಸಿ. ಕ್ರೀಡೆಗಳಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಾಗಿದ್ದು,ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದು ಸಲಹೆ ನೀಡಿದ ಅವರು ಪೋಷಕರ ಸಹಕಾರಕ್ಕೆ ಮನವಿ ಮಾಡಿದರು.
ಬದಲಾದ ಆಹಾರ ಪದ್ದತಿಯಿಂದಾಗಿ ಇಂದು ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿದ್ದು, ಇದರ ತಡೆಗೆ ಕ್ರೀಡೆ ಸಹಕಾರಿ ಎಂದ ಅವರು, ದೈಹಿಕವಾಗಿ ಆರೋಗ್ಯದಿಂದಿದ್ದಾರೆ ಮಾತ್ರವೇ ಮಾನಸಿಕವಾಗಿಯೂ ಸದೃಢರಾಗಿರಲು ಸಾಧ್ಯ ಎಂಬ ಸತ್ಯ ಅರಿತು ಪಠ್ಯದಷ್ಟೇ ಪ್ರಮುಖವಾಗಿರುವ ಕ್ರೀಡೆಗಳಲ್ಲಿ ಪಾಲ್ಗೊಳ್ಳಿ, ನಂತರ ಪಠ್ಯ ಕಲಿಕೆಯಲ್ಲಿ ಖುಷಿಯಿಂದ ಭಾಗವಹಿಸಿ ಎಂದು ಹೇಳಿದರು.
ಇಂದಿನ ಪೋಷಕರು ಮಕ್ಕಳ ಅಂಕ ಗಳಿಕೆಯ ಕಡೆ ಮಾತ್ರವೇ ಗಮನಹರಿಸುವುದರಿಂದ ಇಂದಿನ ಮಕ್ಕಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಲುಕಾರಣವಾಗಿದೆ, ಕ್ರೀಡೆಗಳು ಓದಲು ಆತ್ಮಸ್ಥೆರ್ಯ ತುಂಬುತ್ತವೆ ಎಂಬುದನ್ನು ಮರೆಯಬಾರದು ಎಂದರು.
ಜಿಲ್ಲೆಯ ಘನತೆ ಉಳಿಸಿ ಕ್ರೀಡೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಎಂದು ಶುಭ ಕೋರಿದ ಅವರು, ಗೆದ್ದು ಬನ್ನಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಂಜುನಾಥ್, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಕೆ.ಲೀಲಾ, ತಂಡದ ವ್ಯವಸ್ಥಾಪಕರಾದಂತಹ ಬಳಿಗಾರ ಎಂ ಎಂ ಹಾಗೂ ಪ್ರೇಮಕುಮಾರಿ ಜನರಲ್ ಮ್ಯಾನೇಜರ್ ಎಂ ಮಂಜುನಾಥ್, ಮುರಳಿ ಮೋಹನ್, ಹೋಗರಿ ವೆಂಕಟೇಶ್, ಜೋಶಿ ಶ್ರೀನಿವಾಸಪುರ, ವಿಷಯ ಪರಿವೀಕ್ಷಕ ಸಮೀವುಲ್ಲಾ, ಗೂ ಇತರೆ ದೈಹಿಕ ಶಿಕ್ಷಣ ಶಿಕ್ಷಕರು ಮಕ್ಕಳಿಗೆ ಶುಭ ಹಾರೈಸಿದರು.
---------------
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್