
ಕೋಲಾರ, 21 ನವೆಂಬರ್ (ಹಿ.ಸ.)
ಕೈವಾರ ಶ್ರೀ ಯೋಗಿ ನಾರೇಯಣ ಮಠದ ವತಿಯಿಂದ ಒಂದು ವರ್ಷಗಳ ಕಾಲ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಾದ್ಯಾಂತ ಹಮ್ಮಿಕೊಳ್ಳಲಾಗಿರುವ ಕೈವಾರ ತಾತಯ್ಯನವರ ೩೦೦ನೇ ವರ್ಷದ ಜಯಂತಿಯ ಅಂಗವಾಗಿ ಶ್ರೀರಾಮದಂಡು ಸಂಕೀರ್ತನಾ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬಂಗಾರಪೇಟೆ ತಾಲೂಕಿನ ಪಾಕರಹಳ್ಳಿ ಶ್ರೀಮಹೇಶ್ವರಮ್ಮ ದೇವಾಲಯದಿಂದ ನಾಯಕರಹಳ್ಳಿ ಶ್ರೀರಾಮ ದೇವಾಲಯದವರೆಗೆ ಕೈವಾರ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಎಂ.ಆರ್.ಜಯರಾಮ್ ಪಾದಯಾತ್ರೆಗೆ ಚಾಲನೆ ನೀಡಿದರು.
ಬೆಳಿಗ್ಗೆ ೬ ಗಂಟೆಗೆ ಮಂಜಿನ ಪ್ರಕೃತಿಯ ವಾತಾವರಣದಲ್ಲಿ ಪಾಕರಹಳ್ಳಿ ಶ್ರೀಮಹೇಶ್ವರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭಿಸಲಾಯಿತು. ಸಾವಿರಾರು ಭಕ್ತರು ನಾರೇಯಣ ಧ್ವಜವನ್ನು ಹಿಡಿದು ಭಜನೆಯನ್ನು ಮಾಡುತ್ತಾ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ನಂತರ ಹುದುಕುಳ, ವಟ್ರಕುಂಟೆ, ಬೈರನಾಯಕನಹಳ್ಳಿ, ಅರಣ್ಯ ಆಂಜನೇಯಸ್ವಾಮಿ ಗೋ ಆಶ್ರಮ, ಹನುಮಂತರಾಯನದಿನ್ನೆ ಮಾರ್ಗವಾಗಿ ನಾಯಕರಹಳ್ಳಿ ಶ್ರೀರಾಮರ ದೇವಾಲಯದಲ್ಲಿ ಪಾದಯಾತ್ರೆಯ ಮುಕ್ತಾಯದ ಸಂಕೀರ್ತನೆಯನ್ನು ಸಮರ್ಪಣೆ ಮಾಡಲಾಯಿತು.
ಶ್ರೀರಾಮದಂಡು ಪಾದಯಾತ್ರೆಗೆ ಗ್ರಾಮ ಗ್ರಾಮಗಳೇ ಸಿಂಗರಿಸಿಕೊ0ಡಿದ್ದವು. ಗ್ರಾಮಸ್ಥರು ದಾರಿಯುದ್ದಕ್ಕೂ ರಸ್ತೆಗಳಲ್ಲಿ ತಳಿರು ತೋರಣಗಳನ್ನು ಕಟ್ಟಿದ್ದರು. ರಸ್ತೆಗಳನ್ನು ಸ್ವಚ್ಛಗೊಳಿಸಿದ್ದರು. ರಸ್ತೆಗಳನ್ನು ರಂಗೋಲಿಗಳಿ0ದ ಅಲಂಕರಿಸಿದ್ದರು. ಗ್ರಾಮಗಳಲ್ಲಿ ಭಕ್ತರು ಶ್ರೀರಾಮರ ಹಾಗೂ ಕೈವಾರ ತಾತಯ್ಯನವರ ಭಾವಚಿತ್ರಕ್ಕೆ ವಿಶೇಷಪೂಜೆಗಳನ್ನು ಸಲ್ಲಿಸಿ ಆರತಿಯನ್ನು ಬೆಳಗಿದರು. ಪ್ರತಿಹಳ್ಳಿಯಲ್ಲಿಯೂ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಪಾದಯಾತ್ರಿಗಳಿಗೆ ನೀರು, ಹಾಲು, ಮಜ್ಜಿಗೆ, ಪಾನಕ, ಕೋಸಂಬರಿಗಳನ್ನು ವಿತರಿಸಿ ಸತ್ಕರಿಸಿದರು.
ಪ್ರತಿ ಗ್ರಾಮದ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು. ಬೈರನಾಯಕನಹಳ್ಳಿ ಹಾಗೂ ನಾಯಕರಹಳ್ಳಿಯಲ್ಲಿ ಭಕ್ತಾದಿಗಳಿಗೆ ತಿಂಡಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಪಾದಯಾತ್ರೆಯ ಎಲ್ಲಾ ಗ್ರಾಮಗಳಲ್ಲಿಯೂ ಭಕ್ತರು ಶ್ರದ್ಧಾಭಕ್ತಿಗಳಿಂದ ಭಾಗವಹಿಸಿ, ಪಾದಯಾತ್ರಿಗಳನ್ನು ಮಂಗಳವಾದ್ಯಗಳೊAದಿಗೆ ಬರಮಾಡಿಕೊಂಡರು. ಮಾತೆಯರು ಕಲಶಗಳನ್ನು ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಪಾದಯಾತ್ರೆಯ ಭಜನೆ ಸಂಕೀರ್ತನೆಯ ಉಸ್ತುವಾರಿಯನ್ನು ಶ್ರೀ ಯೋಗಿನಾರೇಯಣ ಸಂಕೀರ್ತನಾ ಯೋಜನೆಯ ಸಂಚಾಲಕರಾದ ಶ್ರೀ ವಾನರಾಶಿ ಬಾಲಕೃಷ್ಣ ಭಾಗವತರ್ ರವರು ವಹಿಸಿದ್ದರು. ನಿರಂತರವಾಗಿ ಭಜನೆಯವರನ್ನು ಎಲ್ಲಿಯೂ ನಿಲ್ಲದೇ ನಡೆಸಿಕೊಂಡು, ಭಕ್ತರಿಗೆ ಉತ್ಸಾಹ ತುಂಬುತ್ತಾ ಮುನ್ನಡೆದರು. ಪಾದಯಾತ್ರೆಯಲ್ಲಿ ಕೈವಾರ ಮಠ ಟ್ರಸ್ಟ್ನ ಉಪಾಧ್ಯಕ್ಷರಾದ ಜೆ.ವಿಭಾಕರರೆಡ್ಡಿ, ಖಜಾಂಚಿ ಆರ್.ಪಿ.ಎಂ.ಸತ್ಯನಾರಾಯಣ್, ಸದಸ್ಯರಾದ ಕೆ.ನರಸಿಂಹಪ್ಪ, ಕೆ.ವಿ.ಸುರೇಶ್, ತ್ಯಾಗರಾಜ್, ಹಾಗೂ ಗ್ರಾಮಗಳ ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಂಗಾರಪೇಟೆ ತಾಲ್ಲೂಕಿನಲ್ಲಿ ಶ್ರೀಪೋತನಭಾಗವತ ಹಾಗೂ ಅಮರನಾರೇಯಣ ಶತಕದ ಪ್ರವಚನ ಸಪ್ತಾಹದೊಂದಿದೆ ತಾಲ್ಲೂಕಿನಲ್ಲಿ ನಡೆಯುವ ಕೈವಾರ ತಾತಯ್ಯನವರ ೩೦೦ನೇ ಜಯಂತಿಯ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್