ಅಮಿತ್ ಶಾ ಭೇಟಿಯಾದ ರಾಮಾಯಣ ಚಿತ್ರತಂಡ
ನವದೆಹಲಿ, 26 ನವೆಂಬರ್ (ಹಿ.ಸ.): ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ರಾಮಾಯಣ’ ಸಿನಿಮಾದ ಚಿತ್ರತಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದೆ. ನವದೆಹಲಿಯಲ್ಲಿ ಗುರುವಾರ ನಡೆದ ಈ ವಿಶೇಷ ಭೇಟಿಯಲ್ಲಿ ನಟರಾದ ರಣಬೀರ್ ಕಪೂರ್, ಸಾಯಿ ಪಲ್ಲವಿ, ನಿರ್ದೇಶಕ ನಿತೇಶ್ ತಿವಾರಿ
Amit-Shah-Meets-Ramayana-Team-Yash-Absent


ನವದೆಹಲಿ, 26 ನವೆಂಬರ್ (ಹಿ.ಸ.):

ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ರಾಮಾಯಣ’ ಸಿನಿಮಾದ ಚಿತ್ರತಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದೆ.

ನವದೆಹಲಿಯಲ್ಲಿ ಗುರುವಾರ ನಡೆದ ಈ ವಿಶೇಷ ಭೇಟಿಯಲ್ಲಿ ನಟರಾದ ರಣಬೀರ್ ಕಪೂರ್, ಸಾಯಿ ಪಲ್ಲವಿ, ನಿರ್ದೇಶಕ ನಿತೇಶ್ ತಿವಾರಿ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಭಾಗವಹಿಸಿದ್ದರು.

ಚಿತ್ರತಂಡ ಅಮಿತ್ ಶಾ ಅವರನ್ನು ಭೇಟಿಯಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಸಂದರ್ಭದಲ್ಲಿ ಚಿತ್ರದ ನಿರ್ಮಾಣ, ಕಥಾಹಂದರ ಹಾಗೂ ಜಾಗತಿಕ ಮಟ್ಟದಲ್ಲಿ ದೊರೆಯುತ್ತಿರುವ ಪ್ರತಿಕ್ರಿಯೆ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.

ಚಿತ್ರತಂಡದ ಪ್ರಯತ್ನಕ್ಕೆ ಅಮಿತ್ ಶಾ ಮೆಚ್ಚುಗೆ

ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಪ್ರಯತ್ನಕ್ಕೆ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಿತ್ರರಂಗದ ತಾಂತ್ರಿಕ ಸಾಮರ್ಥ್ಯ ಮತ್ತು ಸೃಜನಶೀಲತೆಯನ್ನು ವಿಶ್ವದ ಗಮನಕ್ಕೆ ತರುತ್ತಿರುವ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ ಎಂದು ವರದಿಯಾಗಿದೆ.

ಸುಮಾರು 2,000 ಕೋಟಿ ರೂ. ಬೃಹತ್ ಬಜೆಟ್ನಲ್ಲಿ ನಿರ್ಮಾಣವಾಗುತ್ತಿದೆ ಎನ್ನಲಾದ ‘ರಾಮಾಯಣ’ ಚಿತ್ರದಲ್ಲಿ ರವಿ ದುಬೆ, ಸನ್ನಿ ಡಿಯೋಲ್, ಕಾಜಲ್ ಅಗರ್ವಾಲ್ ಹಾಗೂ ರಕುಲ್ ಪ್ರೀತ್ ಸಿಂಗ್ ಸೇರಿದಂತೆ ದೊಡ್ಡ ತಾರಾಗಣವಿದೆ. ಹಾಲಿವುಡ್ನ ಖ್ಯಾತ ಸಂಗೀತ ನಿರ್ದೇಶಕ ಹ್ಯಾನ್ಸ್ ಜಿಮ್ಮರ್ ಹಾಗೂ ಎ.ಆರ್. ರೆಹಮಾನ್ ಸಂಗೀತ ಸಂಯೋಜನೆಯಲ್ಲಿ ಕೈಜೋಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande