ಕನಕದಾಸರ ಆದರ್ಶಗಳನ್ನು ಎಲ್ಲರೂ ಪಾಲಿಸಿ: ಎ. ಪ್ರಶಾಂತ್
ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಕನಕದಾಸರ ಜಯಂತಿ ಆಚರಣೆ
ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕನಕದಾಸರ ಜನ್ಮ ಜಯಂತಿ ಕಾರ್ಯಕ್ರಮ ನಡೆಯಿತು.


ಕೋಲಾರ, 27 ನವೆಂಬರ್ (ಹಿ.ಸ.)

ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಎ. ಪ್ರಶಾಂತ್ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಪಲ್ಲಕ್ಕಿ ಮೆರವಣಿಗೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನಕದಾಸರು ಜಾತಿ, ಕುಲ, ಮತಭೇದಗಳನ್ನು ಲೆಕ್ಕಿಸದೆ ಮನುಕುಲವೆಲ್ಲ ಒಂದೇ, ಎಲ್ಲರೂ ಸಮಾನರು ಎಂಬ ಸಂದೇಶ ಸಾರಿದ್ದಾರೆ. ಅವರ ಆದರ್ಶಗಳನ್ನು ಅನುಸರಿಸುವ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

'ಕುಲ ಕುಲವೆಂದು ಹೊಡೆದಾಡದಿರಿ' ಎಂಬ ಕನಕದಾಸರ ವಾಣಿ ಇಂದಿನ ಕಾಲಘಟ್ಟದಲ್ಲಿಯೂ ಹೆಚ್ಚು ಪ್ರಸ್ತುತವಾಗಿದೆ. ಎಲ್ಲರೂ ಕನಕದಾಸರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯುವಜನರು ಅವರ ಸಾಹಿತ್ಯವನ್ನು ಹೆಚ್ಚು ಓದಿ, ಅದರಲ್ಲಿನ ಮೌಲ್ಯಗಳನ್ನು ಪಾಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಪಿಎಂಸಿ ಸಹಾಯಕ ಕಾರ್ಯದರ್ಶಿ ಎಂ. ಮುನಿರಾಜು, ಸಿಬ್ಬಂದಿ ವರ್ಗದವರು, ಭದ್ರತಾ ಸಿಬ್ಬಂದಿ ಕೆಎನ್‌ಎನ್. ಪ್ರಕಾಶ್, ಸಿಎಂಆರ್. ಶ್ರೀನಾಥ್, ಕೆ.ಆರ್. ಬಚ್ಚೇಗೌಡ, ಪುಟ್ಟರಾಜು, ಸಂತೋಷ್ ಸೇರಿದಂತೆ ಮಂಡಿ ಮಾಲೀಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande