
ಶಿವಮೊಗ್ಗ, 28 ನವೆಂಬರ್ (ಹಿ.ಸ.)
ಶಿವಮೊಗ್ಗ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 19 ಕಾರ್ಯಕರ್ತೆಯರು ಹಾಗೂ 54 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 73 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, 19ರಿಂದ 35 ವರ್ಷ ವಯೋಮಿತಿಯ ಸ್ಥಳೀಯ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗೆ ಕನಿಷ್ಠ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆ ಪಡೆದು, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 19ರೊಳಗೆ ಸಲ್ಲಿಸಬೇಕು. ವಿನೋಬನಗರದ ವೀರ ಸಾವರ್ಕರ್ ವಾಣಿಜ್ಯ ಸಂಕೀರ್ಣದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08182-295110 ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.