
ಧಾರವಾಡ, 28 ನವೆಂಬರ್ (ಹಿ.ಸ.):
ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿರುವ ದುರ್ಗಾದೇವಿ ದೇವಸ್ಥಾನದ ಸಭಾಂಗಣದಲ್ಲಿ ನವೆಂಬರ್ 29ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರ ಜಿಲ್ಲಾ ಮಟ್ಟದ ಕುಂದುಕೊರತೆ ಸಭೆ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರು ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ತಿಳಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.