
ಧಾರವಾಡ, 28 ನವೆಂಬರ್ (ಹಿ.ಸ.):
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಯಡಿ ವಿಶ್ವಕರ್ಮ ಸಮುದಾಯದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಅಂಕುಡೊಂಕು ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ ₹98 ಸಾವಿರ ಹಾಗೂ ನಗರ ಪ್ರದೇಶದಲ್ಲಿ ₹1.20 ಲಕ್ಷ ಮೀರಿರಬಾರದು. ಅರ್ಜಿದಾರರ ವಯಸ್ಸು 55 ವರ್ಷ ಮೀರಿರಬಾರದು. ಈ ಹಿಂದೆ ನಿಗಮದಿಂದ ಸಾಲ ಸೌಲಭ್ಯ ಪಡೆದಿದ್ದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಹಿಂದುಳಿದ ವರ್ಗಗಳ ವಿಶ್ವಕರ್ಮ, ಕಮ್ಮಾರ, ಪತ್ತಾರ ಹಾಗೂ ಬಡಿಗೇರ ಸಮುದಾಯದ ಅರ್ಹರು ಸೇವಾಸಿಂಧು ತಾಣದ ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಹುಬ್ಬಳ್ಳಿ-ಧಾರವಾಡ ಒನ್ ಸೇವಾ ಕೇಂದ್ರಗಳು, ಅಟಲ್ಜಿ ಜನಸ್ನೇಹಿ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ನಿಗಮದ ಜಾಲತಾಣ www.kvcdcl.karnataka.gov.in ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಡಿಸೆಂಬರ್ 24, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿಯ ಸಹಾಯವಾಣಿ ಸಂಖ್ಯೆ 0836-2957829 ಸಂಪರ್ಕಿಸಬಹುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.