

ಬಳ್ಳಾರಿ, 05 ನವೆಂಬರ್ (ಹಿ.ಸ.)
ಬಳ್ಳಾರಿ ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್ಟಿಓ) ಕಚೇರಿ ಮೇಲೆ ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ಕಚೇರಿಯ ಕಡತ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರಿನ ಲೋಕಾಯುಕ್ತ ಡಿವೈಎಸ್ಪಿ ಶ್ರೀನಿವಾಸ ನೇತೃತ್ವದ ತಂಡ ಗುರುವಾರ ಬೆಳಿಗ್ಗೆ 11 ಗಂಟೆಯಿಂದ ಆರ್ಟಿಓ ಕಚೇರಿಯಲ್ಲಿ ಪರಿಶೀಲನೆ ಆರಂಭಿಸಿದೆ. ಅಧಿಕಾರಿಗಳು ಕಚೇರಿಯ ವಿವಿಧ ವಿಭಾಗಗಳಲ್ಲಿಯ ದಾಖಲೆಗಳ ಪರಿಶೀಲನೆ ಮಾಡುತ್ತಲೇ, ಮಾಹಿತಿಗಳನ್ನು ಸಂಗ್ರಹ ಮಾಡುತ್ತಿದ್ದಾರೆ.
ಆರ್ಟಿಓ ಕಚೇರಿಯಲ್ಲಿ ಇರುವ ಕಡತಗಳು, ದಾಖಲೆಗಳು ಹಾಗೂ ಆಡಳಿತಾತ್ಮಕ ವ್ಯವಹಾರಗಳ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್