ಚಾಮರಹಳ್ಳಿಯಲ್ಲಿ ಬೆಲೆಬಾಳುವ ಗೋಮಾಳ ಜಮೀನು ಒತ್ತುವರಿ: ಕ್ರಮಕ್ಕೆ ಒತ್ತಾಯ
ಚಾಮರಹಳ್ಳಿಯಲ್ಲಿ ಬೆಲೆಬಾಳುವ ಗೋಮಾಳ ಜಮೀನು ಒತ್ತುವರಿ: ಕ್ರಮಕ್ಕೆ ಒತ್ತಾಯ
ಕೋಲಾರ ತಾಲ್ಲೂಕಿನ ಚಾಮರಹಳ್ಳಿ ಗ್ರಾಮದ ಬಳಿ ಒತ್ತುವರಿಯಾಗಿರುವ ಸರ್ಕಾರಿ ಗೋಮಾಳ ಜಮೀನು


ಕೋಲಾರ, 06 ನವೆಂಬರ್ (ಹಿ.ಸ.):

ಕೋಲಾರ ತಾಲೂಕಿನ ಹುತ್ತೂರು ಹೋಬಳಿ ಚಾಮರಹಳ್ಳಿ ಗ್ರಾಮದ ಸರ್ವೆ ನಂಬರ್ ೮೦ರಲ್ಲಿರುವ ಅಮೂಲ್ಯವಾದ ಗೋಮಾಳ ಜಮೀನನ್ನು ರಿಯಲ್ ಎಸ್ಟೇಟ್ ಕಬಳಿಕೆದಾರರು ಒತ್ತುವರಿ ಮಾಡಿ ಕಾಂಪೌ0ಡ್ ನಿರ್ಮಾಣ ಮಾಡುತ್ತಿದ್ದಾರೆ. ಕೂಡಲೇ ಇದನ್ನು ತೆರವುಗೊಳಿಸಿ ಸಂಬ0ಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಕ್ರಿಯಾ ವೇದಿಕೆ ಹಾಗೂ ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ.

ಚಾಮರಹಳ್ಳಿ ಗ್ರಾಮದ ಸರ್ವೆ ನಂಬರ್ ೮೦ರಲ್ಲಿ ಬಂಡೆಗಳಿ0ದ ಕೂಡಿದ ಅಪಾರ ಬೆಲೆಬಾಳುವ ಗೋಮಾಳ ಜಮೀನಿದೆ. ರಿಯಲ್ ಎಸ್ಟೇಟ್ ದಂಧೆಕೋರರು ಕಲ್ಲುಬಂಡೆಗಳನ್ನು ಬ್ಲಾಸ್ಟ್ ಮಾಡಿ ಸಮತಟ್ಟು ಮಾಡುವುದರ ಜೊತೆಗೆ, ತಮ್ಮ ಸ್ವಂತ ಜಮೀನಿನೊಂದಿಗೆ ಸರ್ಕಾರಿ ಜಮೀನನ್ನು ಸೇರಿಸಿ ಸುತ್ತಲೂ ಕಾಂಪೌ0ಡ್ ನಿರ್ಮಾಣ ಮಾಡುತ್ತಿದ್ದಾರೆ. ಈ ಕುರಿತು ಸಾರ್ವಜನಿಕರು ಮಾಹಿತಿ ನೀಡಿದರೂ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ಸೇರಿದಂತೆ ಇಲಾಖೆಯ ಅಧಿಕಾರಿಗಳು ಒತ್ತುವರಿದಾರರೊಂದಿಗೆ ಶಾಮೀಲಾಗಿ, ಹಣದ ಆಮಿಷಕ್ಕೆ ಒಳಗಾಗಿ ಯಾವುದೇ ಕ್ರಮ ಕೈಗೊಳ್ಳದೆ ವಾಪಸ್ ಬಂದಿದ್ದಾರೆ ಎಂದು ಮುಖಂಡರು ಆರೋಪಿಸಿದ್ದಾರೆ.

ಬೆಲೆಬಾಳುವ ಸರ್ಕಾರಿ ಜಮೀನುಗಳನ್ನು ರಕ್ಷಿಸಬೇಕಾದ ಜವಾಬ್ದಾರಿಯುತ ಅಧಿಕಾರಿಗಳೇ ಒತ್ತುವರಿಗೆ ಕುಮ್ಮಕ್ಕು ನೀಡುತ್ತಿರುವುದರಿಂದ ಗೋಮಾಳ ಜಮೀನುಗಳು ಕಣ್ಮರೆಯಾಗುತ್ತಿವೆ. ಆದ್ದರಿಂದ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಅವರು ಈ ಕೂಡಲೇ ಎಚ್ಚೆತ್ತುಕೊಂಡು, ಒತ್ತುವರಿ ಮಾಡಿರುವ ಸ್ಥಳವನ್ನು ತೆರವುಗೊಳಿಸಬೇಕು ಹಾಗೂ ಕರ್ತವ್ಯಲೋಪವೆಸಗಿದ ಅಧಿಕಾರಿಗಳು ಹಾಗೂ ಒತ್ತುವರಿದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಕ್ರಿಯಾ ವೇದಿಕೆ ಜಿಲ್ಲಾಧ್ಯಕ್ಷ ಚನ್ನಪ್ಪನಹಳ್ಳಿ ಜಿ. ನಾಗರಾಜ್, ರೈತ ಸಂಘದ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್ ಗೌಡ ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande