ನ. 16ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳ ಚುನಾವಣೆ
ಹುಬ್ಬಳ್ಳಿ, 07 ನವೆಂಬರ್ (ಹಿ.ಸ.): ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ನಾಲ್ಕು ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ನವೆಂಬರ್ 16ರಂದು ಚುನಾವಣೆ ನಡೆಯಲಿದೆ. ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಸ್ಥಾಯಿ ಸಮಿತಿಗಳ ಸದಸ್ಯತ್ವಕ್ಕೆ ನಾಮಪತ್ರ ಸ್ವೀಕರಿಸಲಾಗುವುದು. ಮಧ್
ನ. 16ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳ ಚುನಾವಣೆ


ಹುಬ್ಬಳ್ಳಿ, 07 ನವೆಂಬರ್ (ಹಿ.ಸ.):

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ನಾಲ್ಕು ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ನವೆಂಬರ್ 16ರಂದು ಚುನಾವಣೆ ನಡೆಯಲಿದೆ.

ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಸ್ಥಾಯಿ ಸಮಿತಿಗಳ ಸದಸ್ಯತ್ವಕ್ಕೆ ನಾಮಪತ್ರ ಸ್ವೀಕರಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande