ಪರಿಹಾರದ ಹೆಸರಿನಲ್ಲಿ ಕಣ್ಣೊರೆಸುವ ತಂತ್ರ, ಬೆಲೆ ಏರಿಕೆಯಿಂದ ಜನರ ಜೇಬಿಗೆ ಕತ್ತರಿ: ಶಂಕರ ಪಾಟೀಲ ಮುನೇನಕೊಪ್ಪ
ಹುಬ್ಬಳ್ಳಿ, 07 ನವೆಂಬರ್ (ಹಿ.ಸ.): ರಾಜ್ಯದ ಕಾಂಗ್ರೆಸ್ ಸರ್ಕಾರ ಒಂದು ಕೈಯಲ್ಲಿ ಬಿಡಿಗಾಸಿನ ಪರಿಹಾರ ನೀಡಿ, ಮತ್ತೊಂದು ಕೈಯಲ್ಲಿ ಬೆಲೆ ಏರಿಕೆಯ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು
ಶಂಕರ ಪಾಟೀಲ ಮುನೇನಕೊಪ್ಪ


ಹುಬ್ಬಳ್ಳಿ, 07 ನವೆಂಬರ್ (ಹಿ.ಸ.):

ರಾಜ್ಯದ ಕಾಂಗ್ರೆಸ್ ಸರ್ಕಾರ ಒಂದು ಕೈಯಲ್ಲಿ ಬಿಡಿಗಾಸಿನ ಪರಿಹಾರ ನೀಡಿ, ಮತ್ತೊಂದು ಕೈಯಲ್ಲಿ ಬೆಲೆ ಏರಿಕೆಯ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರಿಗೆ ನೀಡುತ್ತಿದ್ದ ₹2,500 ಪರಿಹಾರ ಮೊತ್ತವನ್ನು ₹5,000ಕ್ಕೆ ಹೆಚ್ಚಿಸಲು ಸರ್ಕಾರ ಮುಂದಾಗಿರುವುದನ್ನು ಪ್ರಸ್ತಾಪಿಸಿದ ಅವರು, ಮತ್ತೊಂದೆಡೆ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿದೆ ಎಂದು ಟೀಕಿಸಿದರು.

ಹಾಲಿನ ದರ ಏರಿಕೆಯಿಂದ ಮಕ್ಕಳಿರುವ ಕುಟುಂಬಗಳು ಹಾಗೂ ಬಸ್ ಪ್ರಯಾಣ ದರ ಹೆಚ್ಚಳದಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ನಿತ್ಯ ಪ್ರಯಾಣಿಕರು ಹೆಚ್ಚುವರಿ ಆರ್ಥಿಕ ಹೊರೆ ಹೊರಬೇಕಾಗಿದೆ. ರೈತರು, ಕಾರ್ಮಿಕರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಸ್ಥಿತಿಯನ್ನು ಪರಿಗಣಿಸದೆ ಅಗತ್ಯ ಸೇವೆಗಳ ದರ ಹೆಚ್ಚಿಸುವುದು ಸರಿಯಲ್ಲ ಎಂದರು.

ಪರಿಹಾರದ ಹೆಸರಿನಲ್ಲಿ ಜನರ ಕಣ್ಣೊರೆಸುವ ಬದಲು ಬೆಲೆ ಏರಿಕೆಗೆ ಕಡಿವಾಣ ಹಾಕಿ ಜನಸಾಮಾನ್ಯರ ಬದುಕಿಗೆ ನೆಮ್ಮದಿ ನೀಡಬೇಕು. ಸರ್ಕಾರದ ನಿರ್ಧಾರಗಳು ಜನರ ಮೇಲಿನ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತಿವೆ ಎಂದು ಆರೋಪಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande