ದಕ್ಷಿಣ ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ: ನ.12ರಂದು ಕಾಶ್ಮೀರದಲ್ಲಿ ಮಳೆ, ಹಿಮಪಾತ ಸಾಧ್ಯತೆ
ನವದೆಹಲಿ, 07 ನವೆಂಬರ್ (ಹಿ.ಸ.): ತಮಿಳುನಾಡು, ಪುದುಚೇರಿ, ಕಾರೈಕಲ್ ಹಾಗೂ ಕೇರಳ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ನವೆಂಬರ್ 7ರಿಂದ 13ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಹೊಸ ಪಶ್ಚಿಮ ಅಲೆಗಳ ಪ್ರಭಾವದಿಂದ ನವೆಂಬರ್ 12ರಂದು ಕಾಶ್ಮೀರ ಕಣಿವೆಯಲ್ಲಿ ಭಾರಿ ಮಳೆ ಅಥವಾ ಹಿಮಪಾತವಾಗುವ
ಐಎಂಡಿ ಬಿಡುಗಡೆ ಮಾಡಿರುವ ಪೋಟೋ


ನವದೆಹಲಿ, 07 ನವೆಂಬರ್ (ಹಿ.ಸ.):

ತಮಿಳುನಾಡು, ಪುದುಚೇರಿ, ಕಾರೈಕಲ್ ಹಾಗೂ ಕೇರಳ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ನವೆಂಬರ್ 7ರಿಂದ 13ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಹೊಸ ಪಶ್ಚಿಮ ಅಲೆಗಳ ಪ್ರಭಾವದಿಂದ ನವೆಂಬರ್ 12ರಂದು ಕಾಶ್ಮೀರ ಕಣಿವೆಯಲ್ಲಿ ಭಾರಿ ಮಳೆ ಅಥವಾ ಹಿಮಪಾತವಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಭಾರತದ ಹವಾಮಾನ

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ನವೆಂಬರ್ 7ರಿಂದ 10ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೇರಳ ಮತ್ತು ಮಾಹೆಯಲ್ಲಿ ನವೆಂಬರ್ 7 ಮತ್ತು 8ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮೆ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ನವೆಂಬರ್ 7ರಿಂದ 13ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲಿ ನವೆಂಬರ್ 7 ಮತ್ತು 8ರಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲಿ ನವೆಂಬರ್ 9ರಿಂದ 13ರವರೆಗೆ ಅಲ್ಲಲ್ಲಿ ಮಳೆಯಾಗಬಹುದು. ಕರಾವಳಿ ಕರ್ನಾಟಕದಲ್ಲಿ ನವೆಂಬರ್ 7ರಿಂದ 9ರವರೆಗೆ ಹಾಗೂ 13ರಂದು ಮಳೆಯಾಗುವ ಸಾಧ್ಯತೆಯಿದೆ. ತೆಲಂಗಾಣದಲ್ಲಿ ನವೆಂಬರ್ 7 ಮತ್ತು 8ರಂದು ಮಳೆಯಾಗುವ ಮುನ್ಸೂಚನೆ ಇದೆ.

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ನವೆಂಬರ್ 7ರಿಂದ 10ರವರೆಗೆ ಗುಡುಗು, ಮಿಂಚು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ಇದ್ದು, ಕೆಲವೊಮ್ಮೆ 50 ಕಿ.ಮೀ. ತಲುಪಬಹುದು. ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲಿ ನವೆಂಬರ್ 7 ಮತ್ತು 8ರಂದು ಇದೇ ರೀತಿಯ ಹವಾಮಾನ ಇರಲಿದೆ.

ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮೆಯಲ್ಲಿ ನವೆಂಬರ್ 7ರಿಂದ 9ರವರೆಗೆ ಗುಡುಗು, ಮಿಂಚು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ತೆಲಂಗಾಣದಲ್ಲಿ ನವೆಂಬರ್ 7ರಂದು ಬಿರುಗಾಳಿ ಸಹಿತ ಮಳೆಯಾಗಬಹುದು. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದಲ್ಲಿ ನವೆಂಬರ್ 7ರಂದು ಗುಡುಗು, ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಲಕ್ಷದ್ವೀಪ ಮತ್ತು ಅದರ ಸುತ್ತಮುತ್ತಲಿನ ಸಮುದ್ರ ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಕೆಲವೊಮ್ಮೆ 50 ಕಿ.ಮೀ. ತಲುಪುವ ಸಾಧ್ಯತೆಯಿದೆ. ಹೀಗಾಗಿ ನವೆಂಬರ್ 7ರಂದು ಈ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಸೂಚಿಸಲಾಗಿದೆ.

ಉತ್ತರ ಭಾರತದ ಹವಾಮಾನ

ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್‌ನಲ್ಲಿ ನವೆಂಬರ್ 10ರಂದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 11ರಿಂದ 13ರವರೆಗೆ ಈ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

ಹಿಮಾಚಲ ಪ್ರದೇಶದಲ್ಲಿ ನವೆಂಬರ್ 10ರಿಂದ 13ರವರೆಗೆ ಹಾಗೂ ಉತ್ತರಾಖಂಡದಲ್ಲಿ ನವೆಂಬರ್ 8ರಿಂದ 11ರವರೆಗೆ ಮತ್ತು ನವೆಂಬರ್ 13ರಂದು ಮಳೆಯಾಗಬಹುದು. ಹರಿಯಾಣ, ಚಂಡೀಗಢ, ದೆಹಲಿ ಮತ್ತು ಪಂಜಾಬ್‌ನಲ್ಲಿ ನವೆಂಬರ್ 11ರಿಂದ 13ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಜಮ್ಮು-ಕಾಶ್ಮೀರ, ಲಡಾಖ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 10ರಿಂದ 13ರವರೆಗೆ ಗುಡುಗು, ಮಿಂಚು ಸಹಿತ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಕೆಲವೊಮ್ಮೆ ಗಾಳಿಯ ವೇಗ 60 ಕಿ.ಮೀ. ತಲುಪಬಹುದು. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ಮತ್ತು 13ರಂದು ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ನಿರೀಕ್ಷೆಯಿದೆ.

ನವೆಂಬರ್ 12ರಂದು ಕಾಶ್ಮೀರ ಕಣಿವೆಯಲ್ಲಿ ಅಲ್ಲಲ್ಲಿ ಭಾರಿ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ.

ಪೂರ್ವ ಭಾರತದಲ್ಲಿ ಮಳೆ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನವೆಂಬರ್ 7ರಿಂದ 13ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ನವೆಂಬರ್ 9ರಿಂದ 13ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದೇ ಅವಧಿಯಲ್ಲಿ ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳಬಹುದು.

ಗಂಗಾ ನದಿ ಬಯಲು ಪ್ರದೇಶದ ಪಶ್ಚಿಮ ಬಂಗಾಳ, ಉಪ ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ನವೆಂಬರ್ 9ರಿಂದ 12ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಜಾರ್ಖಂಡ್‌ನಲ್ಲಿ ನವೆಂಬರ್ 10 ಮತ್ತು 11ರಂದು, ಬಿಹಾರದಲ್ಲಿ ನವೆಂಬರ್ 11ರಂದು ಹಾಗೂ ಒಡಿಶಾದಲ್ಲಿ ನವೆಂಬರ್ 7ರಂದು ಮತ್ತು ನವೆಂಬರ್ 10ರಿಂದ 12ರವರೆಗೆ ಮಳೆಯಾಗಬಹುದು.

ಈಶಾನ್ಯ ಭಾರತದಲ್ಲೂ ಮಳೆ ಸಾಧ್ಯತೆ

ಅರುಣಾಚಲ ಪ್ರದೇಶದಲ್ಲಿ ನವೆಂಬರ್ 7ರಂದು ಹಾಗೂ ನವೆಂಬರ್ 9ರಿಂದ 13ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ನವೆಂಬರ್ 9ರಿಂದ 13ರವರೆಗೆ ಮಳೆಯಾಗಬಹುದು. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ನವೆಂಬರ್ 7ರಿಂದ 12ರವರೆಗೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ಅಸ್ಸಾಂ ಮತ್ತು ಮೇಘಾಲಯದಲ್ಲಿ ನವೆಂಬರ್ 11ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ನವೆಂಬರ್ 10 ಮತ್ತು 11ರಂದು ಭಾರಿ ಮಳೆಯಾಗಬಹುದು.

ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಮುಂದಿನ ಒಂದು ವಾರದಲ್ಲಿ ಗಮನಾರ್ಹ ಹವಾಮಾನ ಬದಲಾವಣೆ ಅಥವಾ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande