ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ, 07 ನವೆಂಬರ್ (ಹಿ.ಸ.): ಕಾಂಗ್ರೆಸ್ ಪಕ್ಷ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಸುಳ್ಳು ಮತ್ತು ಮಿಥ್ಯಗಳನ್ನು ಬಿಂಬಿಸುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ತೀವ
ಪ್ರಹ್ಲಾದ ಜೋಶಿ ಫೈಲ್ ಪೋಟೋ


ಹುಬ್ಬಳ್ಳಿ, 07 ನವೆಂಬರ್ (ಹಿ.ಸ.):

ಕಾಂಗ್ರೆಸ್ ಪಕ್ಷ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಸುಳ್ಳು ಮತ್ತು ಮಿಥ್ಯಗಳನ್ನು ಬಿಂಬಿಸುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕಾಲಕಾಲಕ್ಕೆ ನಡೆಯುತ್ತಲೇ ಬಂದಿದೆ. ದೇಶದಲ್ಲಿ 13 ಕೋಟಿ ಜನರ ಮತಗಳನ್ನು ಅಳಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಆದರೆ, ಅವರ ಹೇಳಿಕೆಯ ಪ್ರಕಾರ, ಈ ಪೈಕಿ ಮೂರು ಕೋಟಿ ಜನರು ಮೃತಪಟ್ಟಿದ್ದಾರೆ. ಮತದಾರರ ಪಟ್ಟಿಯಲ್ಲಿ ಯಾರ ಹೆಸರು ಬಿಟ್ಟುಹೋಗಿದೆಯೋ ಅಂತಹವರು ಸೂಕ್ತವಾಗಿ ಮೇಲ್ಮನವಿ ಸಲ್ಲಿಸಬೇಕು ಎಂದರು.

1967ರಿಂದ ತಮಿಳುನಾಡಿನಲ್ಲಿ ಕಾಂಗ್ರೆಸ್ ಸೋಲುತ್ತಲೇ ಬಂದಿದೆ. 1970ರಿಂದ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ. ದೇಶದ ಹಲವು ರಾಜ್ಯಗಳಲ್ಲಿ ಹತ್ತಾರು ವರ್ಷಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಆ ಸಂದರ್ಭದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಇರಲಿಲ್ಲವೇ? ಆಗ ಜ್ಞಾನೇಶ್ ಕುಮಾರ್ ಇರಲಿಲ್ಲವೇ? ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶ ಮಾದರಿ ಎಂದು ಕಾಂಗ್ರೆಸ್ ಹೇಳುತ್ತಿರುವುದರ ಅರ್ಥವೇನು ಎಂದು ಪ್ರಶ್ನಿಸಿದ ಅವರು, ಅರಾಜಕತೆ ಅಳಿಸಿ ಪ್ರಜಾಪ್ರಭುತ್ವ ಉಳಿಸುವ ಹೋರಾಟವನ್ನು ನಾವು ಮಾಡುತ್ತಿದ್ದೇವೆ ಎಂದರು.

ಕಾಂಗ್ರೆಸ್ ಪಕ್ಷ ಈ ಹಿಂದೆ ಸಮಾಜವಾದಿ ಪಕ್ಷವನ್ನು ಕತ್ತು ಹಿಡಿದು ಹೊರಹಾಕಿತ್ತು. ಆದರೆ, ಈಗ ಉತ್ತರ ಪ್ರದೇಶದಲ್ಲಿ ಅದೇ ಸಮಾಜವಾದಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್‌ನ ರಾಜಕೀಯ ನಿಲುವುಗಳಲ್ಲಿ ಸ್ಥಿರತೆ ಇಲ್ಲ. ಜನರ ಮುಂದೆ ಸುಳ್ಳು ಮತ್ತು ಮಿಥ್ಯೆಗಳನ್ನು ಬಿಂಬಿಸುವ ಕೆಲಸ ಮಾಡುತ್ತಿದೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande