ಜನರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸಿ: ಸಚಿವ ಸಂತೋಷ್ ಲಾಡ್ ಸೂಚನೆ
ಹುಬ್ಬಳ್ಳಿ, 07 ನವೆಂಬರ್ (ಹಿ.ಸ.): ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾ ಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಿ ಕಾಲಮಿತಿಯಲ್ಲಿ ಪರಿಹರಿಸಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಸೂಚಿಸ
ಪ್ರಜಾಸೇವಾ ಅಭಿಯಾನ


ಹುಬ್ಬಳ್ಳಿ, 07 ನವೆಂಬರ್ (ಹಿ.ಸ.):

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾ ಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಿ ಕಾಲಮಿತಿಯಲ್ಲಿ ಪರಿಹರಿಸಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಸೂಚಿಸಿದರು.

ಕಲಘಟಗಿ ತಾಲೂಕಿನ ಬಮ್ಮಿಗಟ್ಟಿಯ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಹಳ್ಳಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದು ಸರ್ಕಾರದ ಉದ್ದೇಶವಾಗಿದೆ. ಸಭೆಯಲ್ಲಿ ಸ್ವೀಕರಿಸುವ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲು ಆದ್ಯತೆ ನೀಡಬೇಕು. ಸಾಧ್ಯವಾಗದಿದ್ದರೆ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಪರಿಹಾರ ಕಲ್ಪಿಸಲಾಗುವುದು ಎಂದರು.

142 ಅರ್ಜಿಗಳ ಸ್ವೀಕಾರ: ಸಭೆಯಲ್ಲಿ ವಸತಿ, ರಸ್ತೆ ಅಭಿವೃದ್ಧಿ, ಶಾಲೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 142 ಅರ್ಜಿಗಳನ್ನು ಸ್ವೀಕರಿಸಲಾಯಿತು.

ಅರ್ಹ ಫಲಾನುಭವಿಗಳಿಗೆ ಪಶುಸಂಗೋಪನಾ ಇಲಾಖೆಯಿಂದ ಬಿತ್ತನೆ ಬೀಜ, ಕೈಗಾರಿಕಾ ಇಲಾಖೆಯಿಂದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು. ಸೇವೆಯಲ್ಲಿದ್ದಾಗ ಮೃತಪಟ್ಟ ಹೆಸ್ಕಾಂ ನೌಕರರ ಪತ್ನಿ ಶಿಲ್ಪಾ ಮತ್ರೋಡಿ ಅವರಿಗೆ ₹5 ಲಕ್ಷ ಪರಿಹಾರ ನೀಡಲಾಯಿತು. ಭೂ ಗ್ಯಾರಂಟಿ ಯೋಜನೆಯಡಿ ಬಮ್ಮಿಗಟ್ಟಿ ಗ್ರಾಮದ 22 ಜನರಿಗೆ ಇ-ಸ್ವತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande