43.44 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಂಡ ಸೋನೋಲಿ ಶಾಲೆ ಉದ್ಘಾಟಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ, 07 ನವೆಂಬರ್ (ಹಿ.ಸ.): ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೋನೋಲಿ ಗ್ರಾಮದಲ್ಲಿ 43.44 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯ ನೂತನ ಕಟ್ಟಡವನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್
ನವೀಕರಣಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯ ನೂತನ ಕಟ್ಟಡವನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಉದ್ಘಾಟಿಸಿದರು


ಬೆಳಗಾವಿ, 07 ನವೆಂಬರ್ (ಹಿ.ಸ.):

ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೋನೋಲಿ ಗ್ರಾಮದಲ್ಲಿ 43.44 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯ ನೂತನ ಕಟ್ಟಡವನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ರಸ್ತೆ, ಚರಂಡಿ, ದೇವಾಲಯಗಳು, ಶಾಲಾ ಆವರಣ ಹಾಗೂ ಕೊಠಡಿಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಸಂಸ್ಥೆಗಳ ಸ್ಥಾಪನೆ, ಆರೋಗ್ಯ ವ್ಯವಸ್ಥೆಯ ಸುಧಾರಣೆ, ಸಹಕಾರಿ ಸಂಘಗಳ ಕಟ್ಟಡ ನಿರ್ಮಾಣ ಹಾಗೂ ಯುವಕರಿಗೆ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲು ವಿಶೇಷ ಗಮನ ಹರಿಸಲಾಗುವುದು ಎಂದರು.

ಕೇವಲ ಮೂಲಸೌಕರ್ಯ ಅಭಿವೃದ್ಧಿಗೆ ಸೀಮಿತವಾಗದೆ, ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ವಾತಾವರಣ ಕಲ್ಪಿಸುವುದು ಉದ್ದೇಶವಾಗಿದೆ. ನವೀಕರಣಗೊಂಡ ಶಾಲೆಯ ಸುಧಾರಿತ ಸೌಲಭ್ಯಗಳು ಮಕ್ಕಳ ಕಲಿಕೆಗೆ ಉತ್ತೇಜನ ನೀಡಲಿ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪುಂಡಲೀಕ್, ವಿವಿಧ ಸ್ಥಳೀಯ ಮುಖಂಡರು, ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ, ಯುವಕ ಮಂಡಳದ ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande