ರೈಲ್ವೆ ಇಲಾಖೆಯಲ್ಲಿ 118 ಪಾಯಿಂಟ್ಸ್ಮನ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ
ಶಿವಮೊಗ್ಗ, 08 ನವೆಂಬರ್ (ಹಿ.ಸ.): ದಕ್ಷಿಣ ಮಧ್ಯ ರೈಲ್ವೆಯ ಸಿಕಂದರಾಬಾದ್ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 118 ಪಾಯಿಂಟ್ಸ್‌ಮನ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ 54 ವರ್ಷದೊಳಗಿನ ಅರ್ಹ ಮಾಜಿ ಸೈನಿಕರು ಅರ್ಜಿ
ರೈಲ್ವೆ ಇಲಾಖೆಯಲ್ಲಿ 118 ಪಾಯಿಂಟ್ಸ್ಮನ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ


ಶಿವಮೊಗ್ಗ, 08 ನವೆಂಬರ್ (ಹಿ.ಸ.):

ದಕ್ಷಿಣ ಮಧ್ಯ ರೈಲ್ವೆಯ ಸಿಕಂದರಾಬಾದ್ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 118 ಪಾಯಿಂಟ್ಸ್‌ಮನ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ 54 ವರ್ಷದೊಳಗಿನ ಅರ್ಹ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ನ.18ರೊಳಗಾಗಿ ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕು.

ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಯ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ 08182-220925 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ (ಪ್ರ) ಡಾ.ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande