ಆರೋಗ್ಯ ಜಾಗೃತಿಗಾಗಿ ಬೀದಿ ನಾಟಕ ಪ್ರದರ್ಶನ: ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಶಿವಮೊಗ್ಗ, 08 ನವೆಂಬರ್ (ಹಿ.ಸ.): ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2026-27ನೇ ಸಾಲಿನಲ್ಲಿ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕ ಪ್ರದರ್ಶನ ನೀಡುವ ಅರ್ಹ ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಆರೋಗ್ಯ ಮ
ಆರೋಗ್ಯ ಜಾಗೃತಿಗಾಗಿ ಬೀದಿ ನಾಟಕ ಪ್ರದರ್ಶನ: ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನ


ಶಿವಮೊಗ್ಗ, 08 ನವೆಂಬರ್ (ಹಿ.ಸ.):

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2026-27ನೇ ಸಾಲಿನಲ್ಲಿ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕ ಪ್ರದರ್ಶನ ನೀಡುವ ಅರ್ಹ ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯು ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮದಡಿ ಈ ಅವಕಾಶ ಕಲ್ಪಿಸಿದ್ದು, ಜಾನಪದ ಕಲಾ ಪ್ರಕಾರಗಳ ಮೂಲಕ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ.

ಆಸಕ್ತ ಕಲಾ ತಂಡಗಳು ನ.17ರ ಸಂಜೆ 5 ಗಂಟೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಮಾಹಿತಿ, ಶಿಕ್ಷಣ ಮತ್ತು ಸಂವಹನ ವಿಭಾಗದಿಂದ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿದಾರ ಕಲಾ ತಂಡಗಳು ಮತ್ತು ಕಲಾವಿದರು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಜಾನಪದ ಕಲಾ ಪ್ರಕಾರದ ಹೆಸರಿನಲ್ಲಿ ತಂಡ ನೋಂದಣಿಯಾಗಿರಬೇಕು. ನೋಂದಣಿ ನವೀಕರಣ ವರದಿ ಹಾಗೂ ತಂಡದ ಮುಖ್ಯಸ್ಥರ ಅಧಿಕೃತ ವಿಳಾಸದ ವಿವರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಕಲಾ ತಂಡದಲ್ಲಿ ಎಂಟು ಮಂದಿ ಕಲಾವಿದರಿರಬೇಕು. ಕಲಾವಿದರ ವಯಸ್ಸು 60 ವರ್ಷದೊಳಗಿರಬೇಕು. ಆಯಾ ಕಲಾ ಪ್ರಕಾರಕ್ಕೆ ಅನುಗುಣವಾಗಿ ಸ್ವಂತ ಪ್ರಸಾಧನ ಮತ್ತು ಉಡುಪುಗಳನ್ನು ಧರಿಸಿ ಪ್ರದರ್ಶನ ನೀಡಬೇಕು. ತಂಡದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಕಲಾವಿದರಿಗೆ ಅವಕಾಶ ಕಲ್ಪಿಸಿರಬೇಕು. ಇಲಾಖೆಯು ನಿಗದಿಪಡಿಸುವ ದಿನಾಂಕದಂದು ಆಯ್ಕೆ ಸಮಿತಿಯ ಮುಂದೆ ಕಲಾ ಪ್ರದರ್ಶನ ನೀಡುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಮಾಹಿತಿ, ಶಿಕ್ಷಣ ಮತ್ತು ಸಂವಹನ ವಿಭಾಗವನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande