ನ.14 ಮತ್ತು 15ರಂದು ಬಳ್ಳಾರಿಯಲ್ಲಿ 23ನೇ ಅಖಂಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಬಳ್ಳಾರಿ, 09 ನವೆಂಬರ್ (ಹಿ.ಸ.) ಕನ್ನಡ ಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾ ಘಟಕವು ನವೆಂಬರ್ 14ರ ಶನಿವಾರ ಮತ್ತು 15ರ ಭಾನುವಾರ ರಾಘವಾ ಕಲಾಮಂದಿರದಲ್ಲಿ ಅಖಂಡ ಬಳ್ಳಾರಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಂಡಿದೆ ಎಂದು ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್
ನವಂಬರ್ 14 ಮತ್ತು 15 : ಬಳ್ಳಾರಿ ಜಿಲ್ಲಾ ಮಟ್ಟದ 23ನೇ ಕನ್ನಡ ಸಾಹಿತ್ಯ ಸಮ್ಮೇಳನ


ಬಳ್ಳಾರಿ, 09 ನವೆಂಬರ್ (ಹಿ.ಸ.)

ಕನ್ನಡ ಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾ ಘಟಕವು ನವೆಂಬರ್ 14ರ ಶನಿವಾರ ಮತ್ತು 15ರ ಭಾನುವಾರ ರಾಘವಾ ಕಲಾಮಂದಿರದಲ್ಲಿ ಅಖಂಡ ಬಳ್ಳಾರಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಂಡಿದೆ ಎಂದು ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ನಿಷ್ಠಿರುದ್ರಪ್ಪ ಅವರು ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಪತ್ರಕರ್ತರು - ಸಾಹಿತಿಗಳು ಆಗಿರುವ ಸಿ.ಜಿ. ಹಂಪಣ್ಣ ಅವರು ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ನವೆಂಬರ್ 14ರ ಶನಿವಾರ ಬೆಳಗ್ಗೆ 7:30ಕ್ಕೆ ಮೇಯರ್ ಪಿ. ಗಾದೆಪ್ಪ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಚಿದಾನಂದಪ್ಪ ಅವರು ನಾಡಧ್ವಜಾರೋಹಣ ನಡೆಸುವರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ನಿಷ್ಠಿರುದ್ರಪ್ಪ ಅವರು ಪರಿಷತ್ತಿನ ಧ್ವಜಾರೋಹಣ ನೆರವೇರಿಸುವರು. ಕನ್ನಡ ತಾಯಿ ಭುವನೇಶ್ವರಿ ಮತ್ತು ಸಮ್ಮೇಳನ ಅಧ್ಯಕ್ಷರ ಮೆರವಣಿಗೆಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಬಿ. ನಾಗರಾಜ ಅವರು

ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ನಗರದ ಕನ್ನಡಪರ ಹೋರಾಟಗಾರರು ಮತ್ತು ಕನ್ನಡ ಪರ ಸಂಘಟನೆಗಳ ಮುಖಂಡರುಗಳು ಕಲಾವಿದರು ವಿವಿಧ ಸಂಘಟನೆಗಳ ಮುಖಂಡರುಗಳು ಮುಖ್ಯ ಅತಿಥಿಗಳಾಗಿದ್ದಾರೆ. ಮೆರವಣಿಗೆಯು ಶ್ರೀಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾಘಿ ಗಡಗಿ ಚನ್ನಪ್ಪ ಸರ್ಕಲ್ ಮೂಲಕ ರಾಘವಕಲಾಮಂದಿರವನ್ನು ತಲುಪುವುದು.

ಹಂಪೆ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಿ.ವಿ. ಪರಮಶಿವಮೂರ್ತಿ ಅವರು ಸಮ್ಮೇಳವನ್ನು ಉದ್ಘಾಟಿಸುವರು. ಶಾಸಕ ನಾರಾ ಭರತರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು ಸಾನಿಧ್ಯವಹಿಸುವರು. ಕಮ್ಮರಚೇಡು ಮಠದ ಕಲ್ಯಾಣ ಸ್ವಾಮಿಗಳು ಹಾಗೂ ಆರ್ಚ್ ಬಿಷಪ್ ಡಿಸೋಜ ಅವರು ಅತಿಥಿಗಳಾಗಿದ್ದಾರೆ.

ಸಂಸದ ಈ. ತುಕಾರಾಂ ಅವರು ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ನಿಷ್ಠಿರುದ್ರಪ್ಪ ಅವರು ಪ್ರಸ್ತಾಪಿಕ ಭಾಷಣ ಮಾಡುವರು.

ದೊಡ್ಡಬಸಪ್ಪ, ಕಾಶಿನಾಥ್, ಶಿವಲಿಂಗಪ್ಪ ಹಂದಿಹಾಳ್, ಯಲ್ಲನಗೌಡ, ಚಂದ್ರಶೇಖರ್ ಆಚಾರಿ ಸೇರಿ ಇತರರು ಈ ಸಂದರ್ಭದಲ್ಲಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande