
ಬೆಂಗಳೂರು, 09 ನವೆಂಬರ್ (ಹಿ.ಸ.):
ಕರ್ನಾಟಕ ಉರ್ದು ಅಕಾಡೆಮಿ ಆಯೋಜಿಸಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಹಾಗೂ ಜಶ್ನ್-ಎ-ಉರ್ದು ಸಮಾರಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಸಮಾರಂಭದಲ್ಲಿ ಮಾತನಾಡಿದ ಸಚಿವ ಯು.ಟಿ. ಖಾದರ್, ಉರ್ದು ಅಕಾಡೆಮಿ ಎಲ್ಲರ ಸಹಕಾರದೊಂದಿಗೆ ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಅಕಾಡೆಮಿಯ ಕಾರ್ಯಕ್ರಮಗಳು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗದೆ, ಇಡೀ ಸಮಾಜಕ್ಕೆ ಪ್ರಯೋಜನಕಾರಿಯಾಗಿವೆ. ಈ ನಿಟ್ಟಿನಲ್ಲಿ ಅಕಾಡೆಮಿಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 20 ಸಾಧಕರನ್ನು ಸಮಿತಿಯ ಮೂಲಕ ಆಯ್ಕೆ ಮಾಡಿ ಗೌರವಿಸಲಾಗಿದೆ. ಪ್ರಶಸ್ತಿ ಪಡೆದ ಎಲ್ಲ ಸಾಧಕರಿಗೂ ಅಭಿನಂದನೆಗಳು ಎಂದು ತಿಳಿಸಿದರು.
ಈ ಸಮಾರಂಭ ಕೇವಲ ಒಂದು ದಿನದ ಆಚರಣೆಯಲ್ಲ. ಉರ್ದು ಭಾಷೆಯ ಪರಂಪರೆ, ಇತಿಹಾಸ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ಉದ್ದೇಶವನ್ನು ಹೊಂದಿದೆ. ಭಾಷೆ ಎಂದರೆ ಕೇವಲ ಸಂವಹನದ ಮಾಧ್ಯಮವಲ್ಲ. ಅದು ಆ ನೆಲದ ಪರಂಪರೆ, ಸಂಸ್ಕೃತಿ, ಜೀವನಶೈಲಿ ಮತ್ತು ಮೌಲ್ಯಗಳನ್ನು ಒಳಗೊಂಡ ಸಮಗ್ರ ಸಂಪತ್ತು. ಇಂತಹ ಭಾಷೆ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.