
ಬಾಗಲಕೋಟೆ, 11 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಅಕ್ಕಪಡೆ ತಂಡವು ಬಾಗಲಕೋಟೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಕಾನೂನು ಮತ್ತು ಸುರಕ್ಷತಾ ವಿಷಯಗಳ ಕುರಿತು ಜಾಗೃತಿ ಮೂಡಿಸಿತು.
ಕಾರ್ಯಕ್ರಮದಲ್ಲಿ ಅಕ್ಕಪಡೆ ತಂಡದ ಕಾರ್ಯವೈಖರಿ ಕುರಿತು ಮಾಹಿತಿ ನೀಡಲಾಗಿದ್ದು, ತುರ್ತು ಸಹಾಯವಾಣಿ 112, ಮಹಿಳಾ ಸಹಾಯವಾಣಿ 181, ಮಕ್ಕಳ ಸಹಾಯವಾಣಿ 1098 ಸಂಖ್ಯೆಗಳ ಉಪಯೋಗದ ಬಗ್ಗೆ ವಿವರಿಸಲಾಯಿತು. ಜೊತೆಗೆ ಪೋಕ್ಸೋ ಕಾಯ್ದೆ, ಸಂಚಾರಿ ನಿಯಮಗಳ ಪಾಲನೆ, ‘ಗುಡ್ ಟಚ್–ಬ್ಯಾಡ್ ಟಚ್’ ಕುರಿತು ಅರಿವು ಹಾಗೂ ಬಾಲ್ಯವಿವಾಹದ ಕಾನೂನು ಪರಿಣಾಮಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ಸ್ಪಷ್ಟನೆ ನೀಡಲಾಯಿತು.
ಬಾಲಕಿಯರು ತಮ್ಮ ಹಕ್ಕುಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತರಾಗಿರಬೇಕು ಎಂದು ತಿಳಿಸಿ, ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣ ಸಹಾಯವಾಣಿಗಳನ್ನು ಸಂಪರ್ಕಿಸುವಂತೆ ಸಲಹೆ ನೀಡಲಾಯಿತು. ಕಾರ್ಯಕ್ರಮದಲ್ಲಿ ವಸತಿ ನಿಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa