
ಅಮೃತಸರ, 11 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮಹತ್ವದ ಕಾರ್ಯಾಚರಣೆಯಲ್ಲಿ ಪಂಜಾಬಿನ ಅಮೃತಸರ ಕಮಿಷನರೇಟ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಐದು ಅತ್ಯಾಧುನಿಕ ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪಂಜಾಬ್ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ತಿಳಿಸಿದ್ದಾರೆ.
ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಗ್ಲಾಕ್ 9 ಎಂಎಂ ಮತ್ತು .30 ಬೋರ್ ಪಿಸ್ತೂಲ್‌ಗಳು ಸೇರಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತರು ಪಾಕಿಸ್ತಾನ ಮೂಲದ ಕಳ್ಳಸಾಗಣೆದಾರರೊಂದಿಗೆ ನೇರ ಸಂಪರ್ಕ ಹೊಂದಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಗಡಿಯಾಚೆಗೆ ಅಕ್ರಮ ಶಸ್ತ್ರಾಸ್ತ್ರಗಳ ಪೂರೈಕೆಗೆ ನೆರವಾಗುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ.
ಈ ಸಂಬಂಧ ಅಮೃತಸರದ ಪಿಎಸ್ ಗೇಟ್ ಹಕಿಮಾದಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಅಕ್ರಮ ಶಸ್ತ್ರಾಸ್ತ್ರ ಜಾಲದ ಮುಂದಿನ ಹಾಗೂ ಹಿಂದಿನ ಸಂಪರ್ಕಗಳ ಕುರಿತು ಸಕ್ರಿಯ ತನಿಖೆ ಮುಂದುವರಿದಿದೆ.
ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಮತ್ತು ಸಂಘಟಿತ ಅಪರಾಧಗಳ ವಿರುದ್ಧ ಪಂಜಾಬ್ ಪೋಲಿಸರು ಶೂನ್ಯ ಸಹಿಷ್ಣುತೆ ಧೋರಣೆಯನ್ನು ಅನುಸರಿಸುತ್ತಿದ್ದು, ಇಂತಹ ಜಾಲಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa