
ಬೆಂಗಳೂರು, 11 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಲ್ಲಿ ಉದ್ಭವಿಸಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಮಹತ್ವದ ವಿಡಿಯೋ ಸಂವಾದ ಸಭೆ ನಡೆಯಿತು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಸ್ಥಿತಿಗತಿ, ಭೂಸ್ವಾಧೀನ ಸಮಸ್ಯೆಗಳು, ತಾಂತ್ರಿಕ ಅಡಚಣೆಗಳು ಹಾಗೂ ಕಾಮಗಾರಿಗಳ ವೇಗವರ್ಧನೆ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆಸಲಾಯಿತು. ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುತ್ತಿರುವ ತೊಂದರೆಗಳನ್ನು ತಕ್ಷಣ ಪರಿಹರಿಸಿ, ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರತಿನಿಧಿಗಳು ಹಾಗೂ ಜಿಲ್ಲೆಗಳ ಎಂಜಿನಿಯರ್‌ಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa