ಗ್ಯಾರಂಟಿ ಯೋಜನೆ ತಾಂತ್ರಿಕ ಸಮಸ್ಯೆ ಇತ್ಯರ್ಥಕ್ಕೆ ಸಚಿವ ಎಚ್.ಕೆ. ಪಾಟೀಲ ಸೂಚನೆ
ಗದಗ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನ ಪ್ರಗತಿಯಲ್ಲಿ ಇರುವ ತಾಂತ್ರಿಕ ಸಮಸ್ಯೆಗಳ ಪರಿಹಾರ ಕಾರ್ಯವನ್ನು ವೇಗಗೊಳಿಸಲು ಸಚಿವ ಎಚ್.ಕೆ. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬೆಂಗಳೂರಿನ ವಿಧಾನ ಸಭೆ ಸಚಿವರ ಕಾರ್ಯಾಲಯದ ಸಭಾಂಗಣದಲ್ಲಿ ನಡೆ
ಫೋಟೋ


ಗದಗ, 11 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನ ಪ್ರಗತಿಯಲ್ಲಿ ಇರುವ ತಾಂತ್ರಿಕ ಸಮಸ್ಯೆಗಳ ಪರಿಹಾರ ಕಾರ್ಯವನ್ನು ವೇಗಗೊಳಿಸಲು ಸಚಿವ ಎಚ್.ಕೆ. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಂಗಳೂರಿನ ವಿಧಾನ ಸಭೆ ಸಚಿವರ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಗದಗ ಜಿಲ್ಲೆಯ ಗ್ಯಾರಂಟಿ ಯೋಜನೆಗಳಲ್ಲಿಲೊಂದಾದ ಗೃಹಲಕ್ಷ್ಮೀ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಗದಗ ಜಿಲ್ಲೆಯಲ್ಲಿ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಪಾವತಿದಾರರ ಒಟ್ಟು ಸಂಖ್ಯೆ 2543 ಎಂದು ಸಭೆಯಲ್ಲಿ ಅಧಿಕಾರಿಗಳು ತಿಳಿಸಲಾಯಿತು.

ಗೃಹಲಕ್ಷ್ಮೀ ಯೋಜನೆ ಪಡೆಯಲು ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಪಾವತಿಸದಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ 650 ಫಲಾನುಭವಿಗಳಿಗೆ ಶೀಘ್ರದಲ್ಲಿ ಯೋಜನೆಯ ಸೌಲಭ್ಯ ಕಲ್ಪಿಸುವಂತೆ ಸಚಿವರು ಸೂಚಿಸಿದರು.

ಇದೇ ವೇಳೆ, ಕುಟುಂಬದ ಮುಖ್ಯಸ್ಥ ಮರಣ ಹೊಂದಿದ ಸಂದರ್ಭಗಳಲ್ಲಿ ರೇಷನ್ ಕಾರ್ಡ್ ನವೀಕರಣಕ್ಕೆ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಜನರಿಗೆ ತೊಂದರೆ ಆಗದಂತೆ ಪ್ರಕ್ರಿಯೆ ಸರಳಗೊಳಿಸುವುದು ಅಗತ್ಯವೆಂದರು.

ಸರ್ಕಾರದ ಮಹತ್ತರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಕುಟುಂಬಗಳ ಆರ್ಥಿಕ ನಿರ್ವಹಣೆಗೆ ನೇರ ಸಹಕಾರಿಯಾಗಿದ್ದು, ದೈನಂದಿನ ಕುಟುಂಬ ನಿರ್ವಹಣೆಗೆ ಶಕ್ತಿಯನ್ನು ನೀಡುತ್ತಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಯೋಜನೆಯ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಸಮಯಕ್ಕೆ ತಲುಪುವಂತೆ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಸಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲರು ಸೂಚಿಸಿದರು.

ಸಭೆಯಲ್ಲಿ ಗದಗ ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಗೃಹ ಲಕ್ಷ್ಮೀ ಯೋಜನೆಯ ಅನುಷ್ಠಾನಕ್ಕೆ ಇರುವ ತಾಂತ್ರಿಕ ಸಮಸ್ಯೆಗಳ ಕುರಿತು ಸಭೆಯ ಗಮನಕ್ಕೆ ತರುವ ಮೂಲಕ‌ ಪರಿಹಾರ ಮಾರ್ಗ ನೀಡುವಂತೆ ಕೋರಿದರು.

ಸಭೆಯಲ್ಲಿ ಗದಗ ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ದಯಾನಂದ‌ ಪವಾರ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾ ನಿರ್ದೇಶಕರಾದ ಅನಿತಾ ಲಕ್ಷ್ಮೀ ಹಾಗೂ ರೋಜಲೀನ್, ಸಹಾಯಕ ನಿರ್ದೇಶಕರಾದ ಹೇಮಾ ಎಚ್, ರೀಜು, ಗದಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಅಧಿಕ್ಷಕ ರಾಜು ಕಂಟಿಗೊಣ್ಣವರ ಸೇರಿದಂತೆ ಗದಗ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande