ಬಜೆಟ್ : ಲೋಕೋಪಯೋಗಿ ಇಲಾಖೆ ಅಭಿವೃದ್ಧಿ ಯೋಜನೆಗಳ ಸಭೆ
ಬೆಂಗಳೂರು, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : 2026–27ನೇ ಸಾಲಿನ ರಾಜ್ಯ ಬಜೆಟ್‌ಗೆ ಪೂರ್ವ ಸಿದ್ಧತೆಯ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಪ್ರಮುಖ ಅಭ
Meeting


ಬೆಂಗಳೂರು, 11 ಫೆಬ್ರವರಿ (ಹಿ.ಸ.) :

ಆ್ಯಂಕರ್ : 2026–27ನೇ ಸಾಲಿನ ರಾಜ್ಯ ಬಜೆಟ್‌ಗೆ ಪೂರ್ವ ಸಿದ್ಧತೆಯ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಿದರು.

ಸಭೆಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಪ್ರಮುಖ ಅಭಿವೃದ್ಧಿ ಯೋಜನೆಗಳು, ಹೊಸ ರಸ್ತೆ ಸಂಪರ್ಕಗಳ ನಿರ್ಮಾಣ, ಗ್ರಾಮೀಣ ಪ್ರದೇಶಗಳ ಸಂಚಾರ ವ್ಯವಸ್ಥೆ ಬಲಪಡಿಸುವ ಕಾರ್ಯಕ್ರಮಗಳು ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಸ್ಥಿತಿಗತಿ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದರು.

ಇದೇ ವೇಳೆ ಇಲಾಖೆಯ ವಿವಿಧ ಅಗತ್ಯ ಬೇಡಿಕೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಜನೋಪಯೋಗಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಯಿತು.

ಸಭೆಯಲ್ಲಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು ಹಾಗೂ ಶಾಸಕ ಬಿ.ಆರ್. ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಆರ್ಥಿಕ ಮತ್ತು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande