
ಕೋಲಾರ, ೧೨ ಫೆಬ್ರವರಿ (ಹಿ.ಸ) :
ಆ್ಯಂಕರ್ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕರ ವಿರೋಧಿ ನೀತಿಗಳ ವಿರುದ್ದ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಗುರುವಾರ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ನಗರದ ಗಾಂಧಿವನದಿAದ ಮೆರವಣಿಗೆ ನಡೆಸಿ ತಹಶಿಲ್ದಾರ್ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಹಿರಿಯ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ದೇಶದಲ್ಲಿ ಕಾರ್ಮಿಕರ ಹಕ್ಕುಗಳಿಗಾಗಿ ಇದ್ದ ೨೯ ಕಾರ್ಮಿಕ ಕಾಯ್ದೆಗಳನ್ನು ೪ ಕಾರ್ಮಿಕ ಕೋಡ್‌ಗಳಾಗಿ ಜಾರಿಗೊಳಿಸಿದ್ದಾರೆ ಕಾರ್ಮಿಕರು ಮುಷ್ಕರ ನಡೆಸಿದರೆ ದಂಡ, ಜೈಲು ಶಿಕ್ಷೆ, ವೇತನ ಕಡಿತಗೊಳಿಸಲಾಗುವ ನೀತಿಗಳು ಜಾರಿ ಮಾಡಿದ್ದಾರೆ. ನರೇಗಾದಡಿ ಕೆಲಸದ ಹಕ್ಕನ್ನು ಕಸೆದುಕೊಂಡು ಗ್ರಾಮೀಣ ಜನರ ದುಡಿಯುವ ಹಕ್ಕನ್ನು ನಿಯಂತ್ರಣ ಮಾಡುವ ಮೂಲಕ ಗ್ರಾಮೀಣ ಜನರ ಜೀವನ ಕಸೆದುಕೊಂಡು ಬೀದಿ ಪಾಲಾಗುವಂತೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ದೇಶದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯುಚ್ಛಕ್ತಿ ಖಾಸಗೀಕರಣ, ಪ್ರಸರಣ ಮತ್ತು ಅನುಷ್ಠಾನ ನಿರ್ವಹಣೆ ಖಾಸಗಿ ಬಂಡವಾಳಗಾರರಿಗೆ ನೀಡುವ ಮೂಲಕ ರೈತರು, ಜನ ಸಾಮಾನ್ಯರ ಸಬ್ಸಿಡಿಗೆ ಮೋಸ ಮಾಡಿದ್ದಾರೆ ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡದೇ ಕೃಷಿಯನ್ನು ಉತ್ತೇಜಿಸದೇ ಭೂ ಸ್ವಾದೀನ ಕಾಯ್ದೆ ಮೂಲಕ ರೈತ ಜಮೀನು ಕಸಿದುಕೊಳ್ಳುವ ಹುನ್ನಾರ ಮಾಡಿದ್ದಾರೆ ಇದನ್ನು ವಿರೋಧವನ್ನು ವ್ಯಕ್ತಪಡಿಸಬೇಕಾಗಿದೆ ಎಂದರು.
ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಬೇಕು, ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳು ಸೇರಿದಂತೆ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಬೀಜ ಮಸೂದೆ ಕಾಯ್ದೆಯನ್ನು ವಾಪಸು ಮಾಡುವ ಜೊತೆಗೆ ಕಾರ್ಮಿಕರ ನಾಲ್ಕು ಕೋಡ್ ಗಳನ್ನು ಜಾರಿ ಮಾಡಲು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ತಿಳಿಸಿದರು
ಕೆ.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಕರ್ನಾಟಕ ಸರ್ಕಾರ ಕಾರ್ಮಿಕ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟಿಫಿಕೇಷನ್‌ನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಬೇಕು. ೨೦೨೫ ಆಗಸ್ಟ್ ತಿಂಗಳಲ್ಲಿ ಕನಿಷ್ಠ ವೇತನ ಹೆಚ್ಚಳದ ಕುರಿತು ಕನಿಷ್ಠ ವೇತನ ಸಲಹಾ ಮಂಡಳಿ ನೀಡಿರುವ ಶಿಫಾರಸ್ಸುನ್ನು ಅಂತಿಮ ಅಧಿಸೂಚನೆಯಾಗಿ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಹೆಚ್.ಬಿ ಕೃಷ್ಣಪ್ಪ, ಎಂ. ಭೀಮರಾಜ್, ಎನ್.ಕಲ್ಪನಾ, ಆಶಾ, ವಿ.ಮಂಜುಳ, ಲಕ್ಷ್ಮಿದೇವಿ, ರಾಜಮ್ಮ, ರಾಮಚಂದ್ರಪ್ಪ, ವಿಜಯಕುಮಾರ್, ಅಂಜನಪ್ಪ, ನಿಕಿಲ್, ಶಿವಕುಮಾರ್, ಪೃಥ್ವಿ, ಮೂರ್ತಿ, ರಮೇಶ್, ನಾರಾಯಣರೆಡ್ಡಿ, ಶಾಂತಮ್ಮ, ಬುಟ್ಟಾಲ ಗಣೇಶ್, ಎಂ.ಶ್ರೀನಿವಾಸ್, ನವೀನ್ ಕುಮಾರ್ ಭಾಗವಹಿಸಿದ್ದರು.
ಚಿತ್ರ : ಕೇಂದ್ರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕೋಲಾರದಲ್ಲಿ ತಾಲ್ಲೂಕು ಕಛೇರಿಯ ಮುಂದೆ ಕಾರ್ಮಿಕ ಸಂಘಟನೆಗಳಿ0ದ ಪ್ರತಿಭಟನೆ ನಡೆಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್