ಪ್ರಧಾನಿಗಳ ಗೌರವಕ್ಕೆ ಧಕ್ಕೆ ತರುತ್ತಿರುವುದು ಪಕ್ಷದ ಕೀಳು ಮಟ್ಟದ ನಡುವಳಿಕೆ : ನಿರ್ಮಲಾ ಕೊಳ್ಳಿ
ಗದಗ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪಕ್ಷದ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಪದಾಧಿಕಾರಿಗಳು ರಾಷ್ಟ್ರಪತಿ ಸ್ಥಾನಕ್ಕೆ ಅವಮಾನ ಮಾಡಿರುವ ಬಗ್ಗೆ ಖಂಡನೆ ವ್ಯಕ್ತಪಡಿಸಿ, ಸಂಬಂಧಿಸಿದಂತೆ ನಡೆದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ರವರಿಗೆ ಅವಹೇಳನ ಮಾಡುವಂತೆ ಮಾತುಗಳನ್ನು ಬಳಸಲಾಗಿದೆ ಎಂಬ
ಫೋಟೋ


ಗದಗ, 12 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಪಕ್ಷದ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಪದಾಧಿಕಾರಿಗಳು ರಾಷ್ಟ್ರಪತಿ ಸ್ಥಾನಕ್ಕೆ ಅವಮಾನ ಮಾಡಿರುವ ಬಗ್ಗೆ ಖಂಡನೆ ವ್ಯಕ್ತಪಡಿಸಿ, ಸಂಬಂಧಿಸಿದಂತೆ ನಡೆದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ರವರಿಗೆ ಅವಹೇಳನ ಮಾಡುವಂತೆ ಮಾತುಗಳನ್ನು ಬಳಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇಂತಹ ಹೇಳಿಕೆಗಳು ರಾಷ್ಟ್ರಪತಿ ಸ್ಥಾನಕ್ಕೆ ಹಾಗೂ ದೇಶದ ಗೌರವಕ್ಕೆ ಧಕ್ಕೆಯಾಗುವಂತಿವೆ.

ಕಾಂಗ್ರೆಸ್ ಪಕ್ಷದ ಯೂತ್ ಕಾಂಗ್ರೆಸ್ ಪದಾಧಿಕಾರಿಗಳು ದೇಶದ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ. ರಾಷ್ಟ್ರಪತಿ ಸ್ಥಾನವು ದೇಶದ ಅತ್ಯುನ್ನತ ಸ್ಥಾನವಾಗಿದ್ದು, ಅದಕ್ಕೆ ಅವಮಾನ ಮಾಡುವ ಹೇಳಿಕೆಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.

ಆದ್ದರಿಂದ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ, ಮಹಿಳಾ ಜಿಲ್ಲಾಧ್ಯಕ್ಷರಾದ ನಿರ್ಮಲಾ ಕೊಳ್ಳಿ, ನಿಗಮ ಮಂಡಳಿ ಮಾಜಿ ಅಧ್ಯಕ್ಷರಾದ ಎಮ.ಎಸ್.ಕರೀಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಪ್ರಮುಖರಾದ ಶ್ರೀಪತಿ ಉಡುಪಿ, ಸ್ವಾತಿ ಅಕ್ಕಿ, ಕವಿತಾ ಬಂಗಾರಿ, ರೇಖಾ ಬಂಗಾರಶೆಟ್ರ, ಯೋಗೇಶ್ವರಿ ಭಾವಿಕಟ್ಟಿ, ವಿಜಯಲಕ್ಷ್ಮೀ ದಿಂಡೂರಿ, ಪ್ರೀತಿ ಶಿವಪ್ಪನಮಠ, ಪಾರ್ವತಿ ಪಟ್ಟನಶೆಟ್ಟಿ, ಮೇಗಾ ಕೋಟ್ಟೂರ, ಸುರೇಶ ಮರಳಪ್ಪನವರ, ಸುರೇಶ ಚಿತ್ತರಗಿ, ಶಂಕರ ಕಾಕಿ, ಮಂಜುನಾಥ ಶಾಂತಗೇರಿ, ಅನೀಲ ಅಬ್ಬಿಗೇರಿ, ಸುಧೀರ ಕಾಟಿಗರ, ಶಶಿಧರ ದಿಂಡೂರ, ನಾಗರಾಜ ತಳವಾರ, ರವಿ ಮಾನ್ವಿ ಹಾಗು ಇನ್ನೂ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande