ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ : ಡಿ.ಕೆ.ಶಿವಕುಮಾರ್
ನವದೆಹಲಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಗುದ್ದಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ನಡೆಸಿದ ಮಾತುಕತೆ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ದೆಹಲಿಯ ಜನಪಥದಲ್ಲಿರ
DKS


ನವದೆಹಲಿ, 12 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಗುದ್ದಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ನಡೆಸಿದ ಮಾತುಕತೆ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.

ದೆಹಲಿಯ ಜನಪಥದಲ್ಲಿರುವ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಿವಾಸದಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿ.ಕೆ. ಶಿವಕುಮಾರ್ ಸಭೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ದೆಹಲಿಗೆ ಬಂದಿರುವುದೇ ರಾಜಕೀಯ ಮಾಡಲು. ಎಲ್ಲ ವಿಚಾರಗಳನ್ನು ಮಾತನಾಡದೆ ಸುಮ್ಮನೆ ವಾಪಸ್ ಹೋಗುತ್ತೇನಾ?” ಎಂದು ಪ್ರಶ್ನಿಸಿದರು.

ಸಭೆಯ ಕುರಿತು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದರು. “ಏನು ಮಾತನಾಡಬೇಕೋ ಅದನ್ನೆಲ್ಲ ಮಾತನಾಡಿದ್ದೇನೆ. ಒಳಗೆ ಏನೇನು ಚರ್ಚೆ ನಡೆಯಿತು ಎಂದು ಇಲ್ಲಿ ಹೇಳಲಾಗದು. ಬೀದಿಯಲ್ಲಿ ನಿಂತು ಎಲ್ಲ ಹೇಳುವ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಅಸ್ಸಾಂ ವಿಧಾನಸಭೆ ಚುನಾವಣೆಯ ಕುರಿತು ಚರ್ಚೆ ಮಾಡಲು ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸಲಾಗಿತ್ತು. “ಅಸ್ಸಾಂನಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ,” ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದರು. ಅಸ್ಸಾಂನ ಕೆಲ ನಾಯಕರು ಕೂಡ ಈ ಸಂದರ್ಭದಲ್ಲಿ ಅವರ ಜೊತೆಯಲ್ಲಿದ್ದರು.

ಇದಕ್ಕೂ ಮುನ್ನ ಡಿಕೆ ಶಿವಕುಮಾರ್ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಅಸ್ಸಾಂ ಚುನಾವಣಾ ಸಿದ್ಧತೆ ಕುರಿತು ಚರ್ಚೆ ನಡೆಸಿದ್ದರು. ಆದರೆ, ರಾಹುಲ್ ಗಾಂಧಿ ಜೊತೆ ನಿಖರವಾಗಿ ಏನು ಮಾತುಕತೆ ನಡೆದಿದೆ ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ.

ಬುಧವಾರ ತಡರಾತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande