ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗಬಾರದು : ಡಿಸಿ
ವಿಜಯಪುರ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಕಾಲುವೆ ಜಾಲಗಳ ಮೂಲಕ ಹರಿಸಲಾಗುತ್ತಿರುವ ನೀರನ್ನು ತುಂಬಿಸಿಟ್ಟುಕೊ0ಡು, ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕ
ನೀರು


ವಿಜಯಪುರ, 12 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಕಾಲುವೆ ಜಾಲಗಳ ಮೂಲಕ ಹರಿಸಲಾಗುತ್ತಿರುವ ನೀರನ್ನು ತುಂಬಿಸಿಟ್ಟುಕೊ0ಡು, ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ವಿವಿಧ ತಾಲೂಕಾ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ನಿರ್ವಹಣಾ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ನಡೆಸಿದರು.

ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದ0ತೆ ನೋಡಿಕೊಳ್ಳಬೇಕು. ಲಭ್ಯವಿರುವ ನೀರನ್ನು ಸದ್ಭಳಕೆ ಮಾಡಿಕೊಂಡು ಯಾವುದೇ ಸಮಸ್ಯೆಯಾಗದಂತೆ ನೀರನ್ನು ಕಾಯ್ದಿಟ್ಟುಕೊಳ್ಳಲು ಸಂಬ0ಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ಈಗಿನಿಂದಲೇ ಮುಂಜಾಗ್ರತೆ ವಹಿಸಿ, ಕುಡಿಯುವ ನೀರು ಸಮರ್ಪಕವಾಗಿ ಒದಗಿಸಲು ಯಾವುದೇ ಅಡೆ-ತಡೆ ಉಂಟಾಗದ0ತೆ ನೋಡಿಕೊಳ್ಳಬೇಕು.

ಗ್ರಾಮ ಪಂಚಾಯತಿ,ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಬೋರ್‌ವೆಲ್‌ಗಳ ಮಾಹಿತಿ ಸಂಗ್ರಹಿಸಿಟ್ಟುಕೊಳ್ಳಬೇಕು. ಪ್ರತಿ ಎರಡು ವಾರಕ್ಕೊಮ್ಮೆ ಕಾರ್ಯಪಡೆ ಸಭೆ ನಡೆಸುವಂತೆ ಸೂಚನೆ ನೀಡಿದರು. ಕುಡಿಯವ ನೀರಿಗೆ ಸಮಸ್ಯೆಯಾಗಬಹುದಾದ ವಸತಿ ಪ್ರದೇಶಗಳನ್ನು ಗುರುತಿಸಿಟ್ಟುಕೊಳ್ಳಬೇಕು.ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪೂರ್ವ ಸಿದ್ಧತೆ ಕೈಗೊಳ್ಳಬೇಕು. ಜಿಲ್ಲೆಯ ಗ್ರಾಮ, ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿರುವ ಒವರ್ ಹೆಡ್ ಟ್ಯಾಂಕ್ ಸ್ವಚ್ಛಗೊಳಿಸಬೇಕು. ಸ್ವಚ್ಛಗೊಳಿಸಿದ ಕುರಿತು ಸಂಬ0ಧಿಸಿದ ಗ್ರಾಮ ಪಂಚಾಯತನಲ್ಲಿ ಲಾಗ್ ಪುಸ್ತಕ ನಿರ್ವಹಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ನಿಗಾ ವಹಿಸಬೇಕು. ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಎಚ್ಚರಿಕೆ ವಹಿಸಬೇಕು.ಕುಡಿಯುವ ನೀರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಿದ ನಂತರ ಪೂರೈಸಿ, ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಿ, ಕುಡಿಯುವ ನೀರು ಪೂರೈಸುವ ಮುನ್ನ ನೀರಿನ ಜಲಮೂಲ, ನೀರು ಸಂಗ್ರಹಿಸುವ ಸ್ಥಳ, ನೀರಿನ ಮುಕ್ತಾಯದ ಹಂತದ ಸೇರಿದಂತೆ ಪರೀಕ್ಷಿಸಿದ ನಂತರವೇ ಸಂಬ0ಧಿಸಿದ ಅಧಿಕಾರಿಗಳು ಖಚಿತಪಡಿಸಿಕೊಂಡು ನೀರು ಪೂರೈಕೆಗೆ ಕ್ರಮ ವಹಿಸಬೇಕು.

ಕುಡಿಯುವ ನೀರಿಗಾಗಿ ಕೆರೆ ತುಂಬಿಸಲಾಗುತ್ತಿದ್ದು, ಕೆರೆಯ ನೀರು ಸಂಗ್ರಹ ಸಾಮರ್ಥ್ಯ, ಲಭ್ಯವಿರುವ ಪ್ರಮಾಣ ಸೇರಿದಂತೆ ಕೆರೆಗೆ ನೀರು ಹರಿದು ಬರುವ ದೈನಂದಿನ ಪೂರ್ಣ ಪ್ರಮಾಣದ ಮಾಹಿತಿ ಹೊಂದಬೇಕು.ಸಮಸ್ಯೆ ಏನಾದರೂ ಉದ್ಭವಿಸಿದರೆ ಸಂಬ0ಧಿಸಿದ ಅಧಿಕಾರಿಗಳನ್ನು ಸಂಪರ್ಕ ಸಾಧಿಸಿ, ಪರಿಹರಿಸಿಕೊಳ್ಳಬೇಕು.ಸ್ಥಳೀಯವಾಗಿ ನೀರು ಸಂಗ್ರಹದ ಮಾಹಿತಿ ಹೊಂದಿರಬೇಕು.

ಕುಡಿಯುವ ನೀರಿನ ಸಮಗ್ರ ಯೋಜನೆಯ ಜಲಧಾರೆ ಯೋಜನೆ-1 ಮತ್ತು ಯೋಜನೆ-2ರ ಕಾಮಗಾರಿ ಪ್ರಗತಿ ವಿವರ ಪಡೆದುಕೊಂಡ ಅವರು, ಯೋಜನೆ-1ರಲ್ಲಿನ ಬಾಕಿ ಕಾಮಗಾರಿಗಳಿಗೆ ವೇಗ ನೀಡಿ, ಜಮೀನಿ, ವಿದ್ಯುತ್ ಪೈಪಲೈನ್ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಂಬAಧಿಸಿದ ಅಧಿಕಾರಿಗಳು ಸಮನ್ವಯದಿಂದ ಪರಿಹರಿಸಿಕೊಂಡು, ಎಲ್ಲ ಅಡೆ ತಡೆಗಳನ್ನು ನಿವಾರಿಸಿಕೊಂಡು,ಶೀಘ್ರ ಜಲಧಾರೆ ಯೋಜನೆ-1ರ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ತಾಲೂಕು ಮಟ್ಟದಲ್ಲಿ ನಡೆಯುವ ಕುಡಿಯುವ ನೀರಿನ ಟಾಸ್ಕ ಪೋರ್ಸ ಸಭೆಯಲ್ಲಿ ಜಲಧಾರೆಗೆ ಸಂಬಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ತೆಗೆದುಕೊಳ್ಳಬೇಕು ಸೂಚಿಸಿದರು.

ಜಲಧಾರೆ ಯೋಜನೆ 1 ಹಾಗೂ 2ರ ಕಾಮಗಾರಿ ಕುರಿತ ಸಂಪೂರ್ಣ ವಿವರವನ್ನು ಸಭೆಯಲ್ಲಿ ಪಿಪಿಟಿ ಮೂಲಕ ವಿವರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande