
ಬಾಗಲಕೋಟೆ, 12 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಪರಿಶ್ರಮಿ ನೇಕಾರರು ನಮ್ಮ ಸಂಸ್ಕೃತಿ, ವೈವಿಧ್ಯತೆ ಮತ್ತು ಪರಂಪರೆಗಳ ರಾಯಭಾರಿಗಳಷ್ಟೇ ಅಲ್ಲ, ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರಸ್ತಂಭರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಬನಹಟ್ಟಿಯಲ್ಲಿ ನೇಕಾರ ಸಮುದಾಯದ ಮುಖಂಡರೊಂದಿಗೆ ಸಂವಾದ ನಡೆಸಿದ ಅವರು, ನೇಕಾರರ ಆಶೋತ್ತರಗಳು ಹಾಗೂ ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಪೀಳಿಗೆಯಿಂದ ಪೀಳಿಗೆಗೆ ಕುಲಕಸುಬನ್ನು ಉಳಿಸಿಕೊಂಡು ಬಂದಿರುವ ನೇಕಾರ ಬಂಧುಗಳ ಪರಿಶ್ರಮ, ಸವಾಲುಗಳು ಮತ್ತು ನಿರೀಕ್ಷೆಗಳ ಬಗ್ಗೆ ವಿಸ್ತೃತ ಸಮಾಲೋಚನೆ ನಡೆಸಿದರು.
ನೇಕಾರರ ಹಿತಾಸಕ್ತಿಗಳ ರಕ್ಷಣೆಗೆ ಅಗತ್ಯ ಬೆಂಬಲ ಒದಗಿಸುವುದು ಮತ್ತು ಅವರ ವಿಶ್ವಾಸವನ್ನು ಬಲಪಡಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ವಿಜಯೇಂದ್ರ ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಸಿದ್ದು ಸವದಿ, ಜಗದೀಶ್ ಗುಡಗಂಟಿ, ಬಾಗಲಕೋಟೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ನೇಕಾರ ಸಮುದಾಯದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa