



ಸಂಡೂರು, 18 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಸಂಡೂರು ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಆಂಧ್ರ್ರಪ್ರದೇಶದ ಇಬ್ಬರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿ, ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 110 ಕೆಜಿ ಶ್ರೀಗಂಧದ ಕಟ್ಟಿಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರು ಆಂದ್ರ್ರ ಪ್ರದೇಶದ ಶ್ರೀಸತ್ಯ ಸಾಯಿ ಜಿಲ್ಲೆಯ ರೋಲ್ಲ ಗ್ರಾಮದ ಸುಶೀಲನಗರ ಗ್ರಾಮದ ನಿವಾಸಿಗಳಾದ ಲೋಕೇಶ್ ನಾಯ್ಕ್ ಮತ್ತು ಕಿರಣ್ ಕುಮಾರ್ ಅಲಿಯಾಸ್ ಅರ್ಜುನ ನಾಯ್ಕ್. ಇವರು ಮೆ. ನಿಷತ್ ಫ್ಯಾಗ್ರೆನ್ಸ್ ಫ್ಯಾಕ್ಟರಿಗೆ ಶ್ರೀಗಂಧದ ಕಟ್ಟಿಗೆಗಳನ್ನು ಸಾಗಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್. ಬಸವರಾಜ್ ಅವರು, ಆರೋಪಿಗಳನ್ನು ವಶಕ್ಕೆ ಪಡೆದು, ಪೆನಗೊಂಡ ಅರಣ್ಯ ಅಧಿಕಾರಿಗಳಿಗೆ ದೂರನ್ನು ನೀಡಿದಾಗ, ಅವರು ಮೆ. ನಿಷತ್ ಫ್ಯಾಗ್ರೆನ್ಸ್ ಫ್ಯಾಕ್ಟರಿಗೆ ಭೇಟಿ ನೀಡಿ, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 179 ಕೆಜಿ ಶ್ರೀಗಂಧದ ಕಟ್ಟಿಗೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್